ವರ್ಗಾವಣೆ
ಬೆಂಗಳೂರು: ಕವಿತಾ ಎಸ್.ಮನ್ನಿಕೇರಿ ಅವರನ್ನು ವಿಜಯನಗರ ಜಿಲ್ಲಾಧಿಕಾರಿಯಾಗಿ, ಕೆ.ನಾಗೇಂದ್ರ ಪ್ರಸಾದ್ ಅವರನ್ನು ಬಳ್ಳಾರಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.
ದಲ್ಜೀತ್ ಕುಮಾರ್ ಅವರನ್ನು ಬೆಂಗಳೂರು ಕೇಂದ್ರ ನಗರಪಾಲಿಕೆ ಹೆಚ್ಚುವರಿ ಆಯುಕ್ತ (ಅಭಿವೃದ್ಧಿ) ಹುದ್ದೆಗೆ, ಹುದ್ದೆ ನಿರೀಕ್ಷಣೆಯಲ್ಲಿದ್ದ ಎಸ್.ನವೀನ್ ಕುಮಾರ್ ರಾಜು ಅವರನ್ನು ಬೆಂಗಳೂರು ದಕ್ಷಿಣ ನಗರಪಾಲಿಕೆ ಹೆಚ್ಚುವರಿ ಆಯುಕ್ತ (ಅಭಿವೃದ್ಧಿ) ಹುದ್ದೆಗೆ ವರ್ಗಾವಣೆ ಮಾಡಿದೆ.
ಪಂಚಾಯತ್ ರಾಜ್ ಕಾರ್ಯದರ್ಶಿ ಡಿ.ರಂದೀಪ್ ಅವರಿಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಆಯುಕ್ತ ಹುದ್ದೆಯ ಹೆಚ್ಚುವರಿ ಹೊಣೆ ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.