ADVERTISEMENT

ಶಮ್ಲಾ ಇಕ್ಬಾಲ್‌ಗೆ ಮಹಿಳಾ, ಮಕ್ಕಳ ಅಭಿವೃದ್ಧಿ ಇಲಾಖೆ ಹೊಣೆ

​ಪ್ರಜಾವಾಣಿ ವಾರ್ತೆ
Published 17 ಜೂನ್ 2025, 15:53 IST
Last Updated 17 ಜೂನ್ 2025, 15:53 IST
<div class="paragraphs"><p>ಶಮ್ಲಾ ಇಕ್ಬಾಲ್</p></div>

ಶಮ್ಲಾ ಇಕ್ಬಾಲ್

   

ಬೆಂಗಳೂರು: ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಕಾರ್ಯದರ್ಶಿ ಶಮ್ಲಾ ಇಕ್ಬಾಲ್ ಅವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.

ಶಿಕ್ಷಣ ಇಲಾಖೆ ಆಯುಕ್ತ ತ್ರಿಲೋಕ್‌ ಚಂದ್ರ ಕೆ.ವಿ ಅವರಿಗೆ ಸಮಗ್ರ ಶಿಕ್ಷಣ ಯೋಜನೆ ನಿರ್ದೇಶಕ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ. ಪದವಿಪೂರ್ವ ಶಿಕ್ಷಣ ನಿರ್ದೇಶಕಿ ಸಿಂಧು ಪಿ.ರೂಪೇಶ್ ಅವರಿಗೆ ಶಿಕ್ಷಣ ಇಲಾಖೆ (ಬಿಸಿಯೂಟ) ನಿರ್ದೇಶಕ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಅಧ್ಯಕ್ಷ ಬಸವರಾಜೇಂದ್ರ ಎಚ್‌ ಅವರನ್ನು ಸರ್ಕಾರಿ ವೈಮಾನಿಕ ತರಬೇತಿ ಶಾಲೆ, ಜಕ್ಕೂರು ಇದರ ನಿರ್ದೇಶಕ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.

ADVERTISEMENT

ಏಡ್ಸ್‌ ತಡೆ ಸೊಸೈಟಿ ಯೋಜನಾ ನಿರ್ದೇಶಕಿ ವಿನೋತ್ ಪ್ರಿಯಾ ಆರ್‌ ಅವರಿಗೆ ನ್ಯಾ. ಜಾನ್ ಮೈಕೆಲ್ ಕುನ್ಹ ಆಯೋಗದ ವರದಿ ಮತ್ತು ಸಂಪುಟ ಉಪಸಮಿತಿ ಶಿಫಾರಸುಗಳ ಅನುಷ್ಠಾನ ಮೇಲ್ವಿಚಾರಣೆ ವಿಭಾಗದ ವಿಶೇಷ ಅಧಿಕಾರಿ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.