ವರ್ಗಾವಣೆ
ಬೆಂಗಳೂರು: ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಎಡಿಜಿಪಿ ಅರುಣ್ ಚಕ್ರವರ್ತಿ ಅವರನ್ನು ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಸ್ಥಾನಕ್ಕೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಕರ್ನಾಟಕ ವಿದ್ಯುತ್ ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ ಲೋಖಂಡೆ ಸ್ನೇಹಲ್ ಸುಧಾಕರ್ ಅವರಿಗೆ ಕಾರ್ಮಿಕ ಇಲಾಖೆ ಇಎಸ್‌ಐಎಸ್ ಆಯುಕ್ತರ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.