ನವದೆಹಲಿ: ಕರ್ನಾಟಕ ವಿಧಾನಸಭೆಯ 2018ರ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರು ಬಾದಾಮಿ ವಿಧಾನಸಭಾ ಕ್ಷೇತ್ರದಲ್ಲಿ ತಮ್ಮ ಗೆಲುವನ್ನು ಖಚಿತಪಡಿಸಿಕೊಳ್ಳಲು 3,000 ಮತಗಳನ್ನು ಖರೀದಿಸಿದ್ದರು ಎಂದು ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ನೀಡಿರುವ ಹೇಳಿಕೆ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿ ಬಿಜೆಪಿಯ ರಾಜ್ಯಸಭಾ ಸದಸ್ಯ ಲಹರ್ ಸಿಂಗ್ ಸಿರೋಯಾ ಅವರು ಭಾರತೀಯ ಚುನಾವಣಾ ಆಯೋಗಕ್ಕೆ ಮಂಗಳವಾರ ಒತ್ತಾಯಿಸಿದ್ದಾರೆ.
ʼಆಗ ಸಿದ್ದರಾಮಯ್ಯ ಅವರಿಗೆ ಆಪ್ತರಾಗಿದ್ದ ಇಬ್ರಾಹಿಂ ಅವರು ಕಾಂಗ್ರೆಸ್ ನಾಯಕ ಬಿ.ಬಿ. ಚಿಮ್ಮನಕಟ್ಟಿ ಜತೆಗೆ ಸೇರಿ ಮತಗಳನ್ನು ಖರೀದಿಸಲು ಸಹಾಯ ಮಾಡಿದ್ದರು. ಬಾದಾಮಿಯಲ್ಲಿ ಸಿದ್ದರಾಮಯ್ಯ ಅವರ ಗೆಲುವಿನ ಅಂತರ ಕೇವಲ 1696 ಮತಗಳಷ್ಟಿತ್ತು. ಈ ಚುನಾವಣಾ ಭ್ರಷ್ಟಾಚಾರದ ಬಗ್ಗೆ ಸಮಗ್ರ ತನಿಖೆ ನಡೆಸಿದರೆ ಸತ್ಯಾಂಶ ಬಯಲಾಗಲಿದೆʼ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.