ADVERTISEMENT

ಕಾಂಗ್ರೆಸ್ ಬಾವುಟ ಹಿಡಿದು ಪಕ್ಷೇತರರ ಪರ ಕೆಲಸ ಮಾಡಿದ್ರೆ ಶಿಸ್ತುಕ್ರಮ: ದಿನೇಶ್

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2019, 8:38 IST
Last Updated 3 ಏಪ್ರಿಲ್ 2019, 8:38 IST
   

ಬೆಂಗಳೂರು: 'ಕಾಂಗ್ರೆಸ್ ಪಕ್ಷದ ಬಾವುಟ ಹಿಡಿದು ಪಕ್ಷೇತರ ಅಭ್ಯರ್ಥಿ ಪರ ಕೆಲಸ ಮಾಡುವುದನ್ನು ನಾವು ಸಹಿಸುವುದಿಲ್ಲ. ಅಂಥವರು ಪಕ್ಷ ಬಿಟ್ಟು ಹೋಗಲಿ. ಒಂದು ವೇಳೆ ಹೋಗದಿದ್ದರೆ ನಾವೇ ಶಿಸ್ತು ಕ್ರಮ ತೆಗದುಕೊಳ್ಳುತ್ತೇವೆ' ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದರು.

ಮಾಧ್ಯಮ ಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು 'ನಮ್ಮ ಪಕ್ಷದ ಚಿಹ್ನೆ ಪಕ್ಷೇತರ ಅಭ್ಯರ್ಥಿ ಜೊತೆ ಕಾಣಿಸಿಕೊಳ್ಳಬಾರದು. ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ಕೊಟ್ಟಿದ್ದೇವೆ. ಮುಖ್ಯಮಂತ್ರಿ ಜೊತೆಗೂ ಈ ಬಗ್ಗೆ ಚರ್ಚೆ ಮಾಡುತ್ತೇನೆ' ಎಂದರು.

'ಪಕ್ಷ ವಿರೋಧಿ ಕೆಲಸ ಯಾರು ಮಾಡಬಾರದು. ಈ ಬಗ್ಗೆ ರಾಹುಲ್ ಗಾಂಧಿ ಸ್ಪಷ್ಟ ಸೂಚನೆ ನೀಡಿದ್ದಾರೆ. ಮಂಡ್ಯದಲ್ಲಿ ನಮ್ಮ ಮೈತ್ರಿ ಅಭ್ಯರ್ಥಿ ಗೆಲ್ಲುವ ಸಾಧಿಸಲಿದ್ದಾರೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.

ADVERTISEMENT

ಹಾಸನ, ಮಂಡ್ಯ, ಮೈಸೂರು ಸೇರಿದಂತೆ ಎಲ್ಲ ಕಡೆ ದೇವೇಗೌಡರು ಮತ್ತು ಸಿದ್ದರಾಮಯ್ಯ ಪ್ರಚಾರ ಮಾಡಲಿದ್ದಾರೆ. ಆ ಸಂದರ್ಭದಲ್ಲಿ ಎಲ್ಲರೂ ಇರುವಂತೆ ಸೂಚಿಸಿದ್ದೇವೆ ಎಂದು ಹೇಳಿದರು.

ಮಂಡ್ಯ ಕಾಂಗ್ರೆಸ್ ನಾಯಕರ ಜೊತೆ ಮಂಗಳವಾರ ರಾತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಹಿಂದೆ ಮುಂಚೆ ಅವರೆಲ್ಲಾ ಒಂದೇ ಪಕ್ಷದಲ್ಲಿ ಇದ್ದವರು. ಕೆಲವು ಸಮಸ್ಯೆ ಇದೆ. ಅದನ್ನು ಬಗೆಹರಿಸುತ್ತೇವೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.