ADVERTISEMENT

ಬಿ.ವೈ.ರಾಘವೇಂದ್ರ ಅವರ ಬಳಿ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ: ಡಿ.ಕೆ. ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2025, 15:15 IST
Last Updated 20 ಅಕ್ಟೋಬರ್ 2025, 15:15 IST
ಡಿ.ಕೆ. ಶಿವಕುಮಾರ್
ಡಿ.ಕೆ. ಶಿವಕುಮಾರ್   

ಬೆಂಗಳೂರು: ‘ಬಿಹಾರ ಚುನಾವಣೆಗೆ ಕರ್ನಾಟಕದಿಂದ ಹಣ ಹೋಗುತ್ತಿದೆ. ಇದಕ್ಕಾಗಿ ಅಧಿಕಾರಿಗಳಿಗೆ ಕಿರುಕುಳ ಹೆಚ್ಚಾಗಿದೆ ಎನ್ನುವ ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರ ಬಳಿ ದಾಖಲೆಗಳಿದ್ದರೆ ಅದನ್ನು ಬಿಡುಗಡೆ ಮಾಡಲಿ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸವಾಲು ಹಾಕಿದರು.

ರಾಘವೇಂದ್ರ ಮಾಡಿರುವ ಆರೋಪದ ಬಗ್ಗೆ  ಪ್ರತಿಕ್ರಿಯಿಸಿದ ಅವರು, ದಾಖಲೆಗಳನ್ನು ಬಿಡುಗಡೆ ಮಾಡಿ ಆರೋಪ ಮಾಡಲಿ. ಹಿಟ್ ಆ್ಯಂಡ್ ರನ್ ಮಾಡುವ ಒಂದಷ್ಟು ನಾಯಕರಿದ್ದಾರೆ. ಅವರಂತೆ ರಾಘವೇಂದ್ರ ಕೂಡಾ ಆಗುವುದು ಬೇಡ. ರಾಘವೇಂದ್ರ ಅವರ ಹೆಸರು ಸುಳ್ಳಿಗೆ ಮತ್ತೊಂದು‌ ಉದಾಹರಣೆ ಆಗುವುದು ಬೇಡ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT