ADVERTISEMENT

ಅಗತ್ಯಬಿದ್ದರೆ ಶಾಲೆ ಬಂದ್, ಪರೀಕ್ಷೆಗಳು ಸ್ಥಗಿತ: ಸಚಿವ ಬಿ.ಸಿ.ನಾಗೇಶ್‌

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2021, 1:51 IST
Last Updated 7 ಡಿಸೆಂಬರ್ 2021, 1:51 IST
ಬಿ.ಸಿ. ನಾಗೇಶ್‌
ಬಿ.ಸಿ. ನಾಗೇಶ್‌   

ಬೆಂಗಳೂರು: ‘ಕೋವಿಡ್‌ ಮೇಲೆ ಸರ್ಕಾರ ನಿಗಾ ವಹಿಸಿದೆ. ಒಂದು ವೇಳೆ ಶಾಲೆಗಳನ್ನು ಮುಚ್ಚಬೇಕಾದ, ಪರೀಕ್ಷೆಗಳನ್ನು ಸ್ಥಗಿತಗೊಳಿಸ ಬೇಕಾದ ಪರಿಸ್ಥಿತಿ ಎದುರಾದರೆ, ಆ ವಿಷಯದಲ್ಲಿ ಹಿಂದೇಟು ಹಾಕುವು ದಿಲ್ಲ’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಸ್ಪಷ್ಟಪಡಿಸಿದರು.

ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘ಸದ್ಯ ಅಂಥ ಯಾವುದೇ ಪರಿಸ್ಥಿತಿ ಇಲ್ಲ. ಪೋಷಕರು ಆತಂಕಕ್ಕೆ ಒಳಗಾಗಬೇಕಿಲ್ಲ’ ಎಂದರು.

‘ಮಕ್ಕಳ ಮೇಲೆ ಕೋವಿಡ್‌ ಯಾವುದೇ ಪರಿಣಾಮ ಬೀರುವುದಿಲ್ಲವೆಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಆದರೂ ನಮಗೆ ಮಕ್ಕಳ ಆರೋಗ್ಯ ಬಹಳ ಮುಖ್ಯ. ಪರಿಸ್ಥಿತಿ ಕೈ ಮೀರಿದರೆ ಪರ್ಯಾಯ ಏನು ಮಾಡಬೇಕು ಎಂದೂ ಯೋಚನೆ ಮಾಡುತ್ತೇವೆ. ತಜ್ಞರ ಸಲಹೆ ಪಡೆದು, ಮುಖ್ಯಮಂತ್ರಿ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು’ ಎಂದು ಹೇಳಿದರು.

ADVERTISEMENT

‘ವಸತಿ ಶಾಲೆಗಳಲ್ಲಿ ಕೊರೊನಾ ಸೋಂಕು ಹೆಚ್ಚಿನ ಸಂಖ್ಯೆಯಲ್ಲಿ ದೃಢ ಪಟ್ಟಿರುವ ಕುರಿತಂತೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ಆಯುಕ್ತರ ಜೊತೆ ಸಮಾಲೋಚನೆ ನಡೆಸಿದ್ದೇನೆ’ ಎಂದರು.

ಓಮೈಕ್ರಾನ್ ನಿಯಂತ್ರಣಕ್ಕೆ ಸರ್ಕಾರ ಸನ್ನದ್ಧ: ಸಿ.ಎಂ

ಬೀದರ್:‘ತಜ್ಞರ ಸಲಹೆ ಆಧರಿಸಿ ಕೋವಿಡ್‌ ಮಾರ್ಗಸೂಚಿಗಳನ್ನು ಕಾಲಕಾಲಕ್ಕೆ ಬದಲಿಸಲಾಗುವುದು. ಓಮೈಕ್ರಾನ್ ನಿಯಂತ್ರಣಕ್ಕೆ ಸರ್ಕಾರ ಎಲ್ಲ ರೀತಿಯಿಂದಲೂ ಸನ್ನದ್ಧವಾಗಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸೋಮವಾರ ಇಲ್ಲಿಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,‘ಹಲವುಶಾಲೆ ಹಾಗೂ ಹಾಸ್ಟೆಲ್‌ಗಳನ್ನು ಸೇರಿಸಿ ರಚಿಸಲಾದ ಕ್ಲಸ್ಟರ್‌ನಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ’ ಎಂದರು.

‘ಚಿಕ್ಕಮಗಳೂರಿನ ಇಂತಹ ಕ್ಲಸ್ಟರ್‌ವೊಂದರಲ್ಲಿ ಎಲ್ಲ ವಿದ್ಯಾರ್ಥಿಗಳ ತಪಾಸಣೆ ಮಾಡಿದಾಗಸೋಂಕು ಪತ್ತೆಯಾಗಿದೆ. ಸದ್ಯ ಹಾಸ್ಟೆಲ್‌ ಅನ್ನು ಸೀಲ್‌ಡೌನ್‌ ಮಾಡಲಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.