
ಪ್ರಜಾವಾಣಿ ವಾರ್ತೆವರ್ಗಾವಣೆ
ಬೆಂಗಳೂರು: ಐಎಫ್‌ಎಸ್ ಅಧಿಕಾರಿ ಶ್ರೀನಿವಾಸುಲು ಅವರನ್ನು ಅರಣ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶಿಸಿದೆ.
ವಿ.ವಿಜಯ್ ಮೋಹನ್ ರಾಜ್ ಅವರನ್ನು ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ವಿಶ್ವಜಿತ್ ಮಿಶ್ರಾ ಅವರಿಗೆ ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಹುದ್ದೆಯ ಹೆಚ್ಚುವರಿ ಹೊಣೆ ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.