ADVERTISEMENT

ಇಳಕಲ್ ಹೆದ್ದಾರಿ ಕಾಮಗಾರಿ: ನಿತಿನ್ ಗಡ್ಕರಿಗೆ ಬೊಮ್ಮಾಯಿ ಮನವಿ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2025, 15:37 IST
Last Updated 6 ಆಗಸ್ಟ್ 2025, 15:37 IST
ನಿತಿನ್‌ ಗಡ್ಕರಿ ಅವರಿಗೆ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದರು. 
ನಿತಿನ್‌ ಗಡ್ಕರಿ ಅವರಿಗೆ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದರು.    

ನವದೆಹಲಿ: ಹಾವೇರಿ- ಗದಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಕಾರವಾರ- ಇಳಕಲ್ ರಾಷ್ಟ್ರೀಯ ಹೆದ್ದಾರಿಯನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಶೀಘ್ರವೇ ವಿಸ್ತೃತ ಯೋಜನಾ ವರದಿಗೆ ಅನುಮೋದನೆ ನೀಡಿ ಕಾಮಗಾರಿ ಪ್ರಾರಂಭಿಸುವಂತೆ ಸಂಸದ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಮಾಡಿದರು.

ಗಡ್ಕರಿ ಅವರನ್ನು ಬುಧವಾರ ಇಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿರುವ ಅವರು, ‘ಕಾರವಾರ, ಕೈಗಾ, ಮುಂಡಗೋಡ, ಸವಣೂರು, ಗದಗ, ಗಜೇಂದ್ರಗಡ ಮಾರ್ಗವಾಗಿ ಇಳಕಲ್ ತಲುಪುವ 318 ಕಿ.ಮೀ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲು ತಾತ್ವಿಕ ಒಪ್ಪಿಗೆ ನೀಡಿದ್ದು, ಯೋಜನೆಯ ಡಿಪಿಆರ್ ಸಲ್ಲಿಕೆಯಾಗಿದೆ ಹಾಗೂ ಭೂ ಸ್ವಾಧೀನ ಪಡಿಸಿಕೊಳ್ಳಲು ನಿರ್ಧರಿಸಲಾಗಿದೆ’ ಎಂದು ಗಮನಕ್ಕೆ ತಂದರು. 

‘ಪ್ರಸ್ತುತ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲು ತೀರ್ಮಾನಿಸಿರುವುದರಿಂದ ರಾಜ್ಯ ಸರ್ಕಾರ ಸರಿಯಾದ ನಿರ್ವಹಣೆ ಮಾಡುತ್ತಿಲ್ಲ. ಇದರಿಂದಾಗಿ, ವಾಹನ ಸಂಚರಿಸಲು ಸಾಧ್ಯವಾಗದ ಸ್ಥಿತಿಯಲ್ಲಿದೆ. ಇನ್ನೊಂದೆಡೆ ಯೋಜನೆಗೆ ಅಧಿಕೃತ ಅನುಮತಿ ನೀಡದೇ ಇರುವುದರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರೂ ಯಾವುದೇ ಕೆಲಸ ಮಾಡುತ್ತಿಲ್ಲ. ಹೀಗಾಗಿ ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಬೇಕು’ ಎಂದು ಕೋರಿದರು. 

ADVERTISEMENT

ಇದಕ್ಕೆ ಹೊಂದಿಕೊಂಡಂತೆ ಇರುವ  ಇತರ ಸಿಆರ್‌ಎಫ್ ರಸ್ತೆಗಳನ್ನು ಅಭಿವೃದ್ಧಿ ಪಡಿಸುವಂತೆ ಮನವಿ ಮಾಡಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.