ADVERTISEMENT

ಈಶ್ವರಪ್ಪ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಆರೋಪ: ವರದಿ ಸಲ್ಲಿಕೆಗೆ ಗಡುವು

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2025, 17:13 IST
Last Updated 5 ಏಪ್ರಿಲ್ 2025, 17:13 IST
<div class="paragraphs"><p>ನ್ಯಾಯಾಲಯ (ಪ್ರಾತಿನಿಧಿಕ ಚಿತ್ರ)&nbsp;</p></div>

ನ್ಯಾಯಾಲಯ (ಪ್ರಾತಿನಿಧಿಕ ಚಿತ್ರ) 

   

ಬೆಂಗಳೂರು: ‘ಆದಾಯ ಮೀರಿ ಅಕ್ರಮ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧದ ಕ್ರಿಮಿನಲ್ ಪ್ರಕರಣದ ಬಗ್ಗೆ ಮೂರು ತಿಂಗಳಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸಿ’ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಿವಮೊಗ್ಗ ಲೋಕಾಯುಕ್ತ ಪೊಲೀಸರಿಗೆ ಆದೇಶಿಸಿದೆ.

ಶಿವಮೊಗ್ಗದ ವಕೀಲ ಬಿ.ವಿನೋದ್ ಸಲ್ಲಿಸಿದ್ದ ಖಾಸಗಿ ದೂರಿಗೆ ಸಂಬಂಧಿಸಿದಂತೆ, ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರು ಹೈಕೋರ್ಟ್ ನಿರ್ದೇಶನದ ಅನುಸಾರ ಶನಿವಾರ ಈ ಕುರಿತಂತೆ ಆದೇಶಿಸಿದ್ದಾರೆ.

ADVERTISEMENT

ವಿಚಾರಣೆಯನ್ನು ಜುಲೈ 5ಕ್ಕೆ ಮುಂದೂಡಲಾಗಿದೆ.

ಪ್ರಕರಣವೇನು?:

‘ಈಶ್ವರಪ್ಪ ಅವರು ಜಲಸಂಪನ್ಮೂಲ ಸಚಿವರಾಗಿದ್ದ ಸಂದರ್ಭದಲ್ಲಿ ಆದಾಯ ಮೀರಿ ಅಕ್ರಮ ಆಸ್ತಿ ಗಳಿಸಿದ್ದಾರೆ’ ಎಂಬುದು ಆರೋಪ. ಈ ಸಂಬಂಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ-1988ರ ಕಲಂ 13(1)(ಡಿ) ಹಾಗೂ 13(1)(ಇ) ಮತ್ತು ಭಾರತೀಯ ದಂಡ ಸಂಹಿತೆ-1860ರ ಕಲಂ 420ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಫಿರ್ಯಾದುದಾರ ಬಿ.ವಿನೋದ್ ಅವರು 2016ರಲ್ಲಿ ಸಲ್ಲಿಸಿದ್ದ ಈ ಖಾಸಗಿ ದೂರನ್ನು ಲೋಕಾಯುಕ್ತ ಕೋರ್ಟ್ ವಜಾಗೊಳಿಸಿತ್ತು. ವಜಾ ಆದೇಶವನ್ನು ಪ್ರಶ್ನಿಸಿ ವಿನೋದ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ದೂರಿ‌ನ ಮರು ಪರಿಗಣನೆಗೆ ಆದೇಶಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.