ADVERTISEMENT

ಅಕ್ರಮ ಆಸ್ತಿ, ಭ್ರಷ್ಟಾಚಾರ ಪ್ರಕರಣ: ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ

​ಪ್ರಜಾವಾಣಿ ವಾರ್ತೆ
Published 8 ಮೇ 2025, 6:00 IST
Last Updated 8 ಮೇ 2025, 6:00 IST
<div class="paragraphs"><p>ಕರ್ನಾಟಕ ಲೋಕಾಯುಕ್ತ</p></div>

ಕರ್ನಾಟಕ ಲೋಕಾಯುಕ್ತ

   

ಬೆಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರ ಆರೋಪ ಸಂಬಂಧ ರಾಜ್ಯದ ವಿವಿಧೆಡೆ ಲೋಕಾಯುಕ್ತ ಪೊಲೀಸರು ಇಂದು (ಗುರುವಾರ) ಬೆಳಿಗ್ಗೆ ದಾಳಿ ನಡೆಸಿದ್ದಾರೆ.

ಕೋಲಾರ, ಯಾದಗಿರಿ, ದಾವಣಗೆರೆ ಮತ್ತು ಬೆಂಗಳೂರಿನ ವಿವಿಧ ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಯುತ್ತಿದೆ.

ADVERTISEMENT

ಕೋಲಾರ ತಾಲ್ಲೂಕಿನ ಭೂಮಾಪನಾ ಇಲಾಖೆ ಸರ್ವೇ ಅಧಿಕಾರಿ ಸುರೇಶ್‌ ಬಾಬು ಜಿ., ಸುರಪುರ ತಾಲ್ಲೂಕು ಆರೋಗ್ಯಾಧಿಕಾರಿ ರಾಜೀವ್‌ ವೆಂಕಟಪ್ಪ ನಾಯಕ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ (ದಾವಣಗೆರೆ) ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಎಂ.ಬಿ ರವಿ ಹಾಗೂ ಜಲ ಸಂಪನ್ಮೂಲ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಜಿ. ಶ್ರೀನಿವಾಸ ಮೂರ್ತಿ ಅವರ ನಿವಾಸ ಹಾಗೂ ಕಚೇರಿಗಳಲ್ಲಿ ಶೋಧ ನಡೆಸಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.