ADVERTISEMENT

ಅಕ್ರಮ ಗಣಿಗಾರಿಕೆ: ರಾಜ್ಯದಲ್ಲಿ ₹78.78 ಕೋಟಿ ದಂಡ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2022, 21:15 IST
Last Updated 1 ಆಗಸ್ಟ್ 2022, 21:15 IST
   

ನವದೆಹಲಿ: ಕರ್ನಾಟಕದಲ್ಲಿ ಅಕ್ರಮ ಗಣಿಗಾರಿಕೆ ಹಾಗೂ ಖನಿಜಗಳ ಕಳ್ಳಸಾಗಣೆಗೆ ಸಂಬಂಧಿಸಿದಂತೆ ಕಳೆದ ಮೂರು ವರ್ಷಗಳಲ್ಲಿ ₹78.78 ಕೋಟಿ ದಂಡ ವಸೂಲಿ ಮಾಡಲಾಗಿದೆ ಎಂದು ಕೇಂದ್ರ ಗಣಿ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

ರಾಜ್ಯಸಭೆಯಲ್ಲಿ ಸದಸ್ಯರೊಬ್ಬರು ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಚಿವರು, ‘ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ 2019–20ರಲ್ಲಿ4,935 ಪ್ರಕರಣಗಳು, 2020–21ರಲ್ಲಿ5,584 ಹಾಗೂ2021–22ರಲ್ಲಿ ಡಿಸೆಂಬರ್ ಅಂತ್ಯದ ವರೆಗೆ4,365 ಪ್ರಕರಣಗಳು ವರದಿಯಾಗಿವೆ. ಈ ಪೈಕಿ,2,412 ಪ್ರಕರಣಗಳಲ್ಲಿ ಎಫ್‌ಐಆರ್ ದಾಖಲಾಗಿವೆ. ನ್ಯಾಯಾಲಯಗಳಲ್ಲಿ1,280 ಪ್ರಕರಣಗಳು ಇವೆ. 658 ವಾಹನಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT