ADVERTISEMENT

ಕಳ್ಳಬೇಟೆ: ಗುಂಡಿನ ಚಕಮಕಿ

600 ಕೆ.ಜಿ ಮಾಂಸ, ಬಂದೂಕು ವಶಪಡಿಸಿಕೊಂಡ ಅರಣ್ಯ ಇಲಾಖೆ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2019, 20:20 IST
Last Updated 11 ಏಪ್ರಿಲ್ 2019, 20:20 IST
ಹನೂರು ತಾಲ್ಲೂಕಿನ ಗಡಿಭಾಗವಾದ ಈರೋಡ್‌ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮಾಂಸ ವಶಪಡಿಸಿಕೊಂಡಿದ್ದಾರೆ
ಹನೂರು ತಾಲ್ಲೂಕಿನ ಗಡಿಭಾಗವಾದ ಈರೋಡ್‌ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮಾಂಸ ವಶಪಡಿಸಿಕೊಂಡಿದ್ದಾರೆ   

ಹನೂರು: ರಾಜ್ಯದ ಗಡಿಭಾಗದಲ್ಲಿ ತಮಿಳುನಾಡು ಅರಣ್ಯಕ್ಕೆ ಹೊಂದಿಕೊಂಡಿರುವ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಬೇಟೆಗಾರರ ನಡುವೆ ಗುರುವಾರ ಗುಂಡಿನ ಚಕಮಕಿ ನಡೆದಿದೆ.

ಮಲೆಮಹದೇಶ್ವರ ವನ್ಯಧಾಮದ ಪಾಲಾರ್ ವನ್ಯಜೀವಿ ವಲಯದ ಈರೋಡ್ ಅರಣ್ಯ ಪ್ರದೇಶದಲ್ಲಿ ಗುಂಡಿನ ಶಬ್ದ ಕೇಳಿ ಬಂದಿದೆ. ಇದನ್ನು ಗಮನಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ತೆರಳಿದಾಗ ಪ್ರಾಣಿಗಳನ್ನು ಬೇಟೆಯಾಡಿ ಮಾಂಸವನ್ನು ಜೀಪಿನಲ್ಲಿಟ್ಟಿರುವುದು ಕಂಡು ಬಂದಿದೆ.

ಈ ವೇಳೆ ಸಿಬ್ಬಂದಿಗಳನ್ನು ಕಂಡ ಬೇಟೆಗಾರರು ಗುಂಡು ಹಾರಿಸಿದ್ದಾರೆ. ಸಿಬ್ಬಂದಿ ಪ್ರತಿದಾಳಿ ನಡೆಸಿದಾಗ ಬೇಟೆಗಾರರು ಪರಾರಿಯಾಗಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.