ADVERTISEMENT

ನೇಮಕಾತಿ ಅಕ್ರಮ: ಸಹ ಶಿಕ್ಷಕರು ಸೆ.14ರವರೆಗೆ ಕಸ್ಟಡಿಗೆ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2022, 19:10 IST
Last Updated 9 ಸೆಪ್ಟೆಂಬರ್ 2022, 19:10 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬೆಂಗಳೂರು: ಪ್ರೌಢಶಾಲೆಗಳ ಗ್ರೇಡ್–2 ಸಹಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಸಂಬಂಧ ಬಂಧಿಸಲಾಗಿರುವ 12 ಸಹ ಶಿಕ್ಷಕರನ್ನು ಹೆಚ್ಚಿನ ವಿಚಾರಣೆಗಾಗಿ ಸೆ. 14ರವರೆಗೆ ಸಿಐಡಿ ಕಸ್ಟಡಿಗೆ ನೀಡಲಾಗಿದೆ.

2014– 15ನೇ ಸಾಲಿನ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ (ಪ್ರೌಢ) ಅವರು ವಿಧಾನಸೌಧ ಠಾಣೆಗೆ ಪ್ರತ್ಯೇಕ ದೂರು ನೀಡಿದ್ದರು. ಅದರನ್ವಯ ಎರಡು ಎಫ್‌ಐಆರ್‌ ದಾಖಲಾಗಿದ್ದವು. ತನಿಖೆ ಹೊಣೆಯನ್ನು ಸಿಐಡಿಗೆ ವಹಿಸಲಾಗಿದೆ.

ತುಮಕೂರು ಹಾಗೂ ವಿಜಯಪುರದಲ್ಲಿ ಕಾರ್ಯಾಚರಣೆ ನಡೆಸಿದ ಸಿಐಡಿ ಅಧಿಕಾರಿಗಳು, ಅಕ್ರಮವಾಗಿ ನೇಮಕವಾಗಿದ್ದ 12 ಸಹ ಶಿಕ್ಷಕರನ್ನು ಇತ್ತೀಚೆಗಷ್ಟೇ ಬಂಧಿಸಿದ್ದರು. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ, ಸಿಐಡಿ ಅಧಿಕಾರಿಗಳ ಕೋರಿಕೆಯಂತೆ ಆರೋಪಿಗಳನ್ನು ಕಸ್ಟಡಿಗೆ ನೀಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.