ADVERTISEMENT

ಐಎಂಎ: ಅಧಿಕಾರಿಗಳ ವಿಚಾರಣೆಗೆ ಅನುಮತಿ

​ಪ್ರಜಾವಾಣಿ ವಾರ್ತೆ
Published 28 ಜನವರಿ 2020, 19:59 IST
Last Updated 28 ಜನವರಿ 2020, 19:59 IST
   

ಬೆಂಗಳೂರು: ಬಹುಕೋಟಿ ವಂಚನೆಯ ಐಎಂಎ (ಐ ಮಾನಿಟರಿ ಅಡ್ವೈಸರಿ ಐಎಂಎ) ಪ್ರಕರಣದಲ್ಲಿ ಹೆಸರು ಕೇಳಿ ಬಂದಿರುವ ಹಿರಿಯ ಇಬ್ಬರು ಪೊಲೀಸ್ ಅಧಿಕಾರಿಗಳ ಮೇಲಿನ ಆರೋಪಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ತನಿಖೆ ನಡೆಸಲು ಸಿಬಿಐಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ ಎಂದು ಗೊತ್ತಾಗಿದೆ.

ಈ ಹಿರಿಯ ಅಧಿಕಾರಿಗಳ ವಿರುದ್ಧ ಕಾನೂನು ರೀತಿಯ ಕ್ರಮಕೈಗೊಳ್ಳಲು ಅನುಮತಿ ನೀಡುವಂತೆ ಕೋರಿ ರಾಜ್ಯ ಸರ್ಕಾರಕ್ಕೆ ಸಿಬಿಐ ಪತ್ರ ಬರೆದಿತ್ತು.

ಐಎಂಎ ವಿರುದ್ಧ ಆರೋಪಗಳು ಕೇಳಿಬಂದಾಗ ಪೊಲೀಸ್ ಅಧಿಕಾರಿಗಳಾಗಿದ್ದ ಈ ಇಬ್ಬರು, ಐಎಂಎ ಪರವಾಗಿ ವರದಿ ಸಿದ್ಧಪಡಿಸಿ ಕ್ಲೀನ್ ಚಿಟ್ ನೀಡಿದ್ದರು. ಐಎಂಎ ಕಂಪನಿಯಿಂದ ವಂಚನೆ ಮುಂದುವರಿಯಲು ಇದು ಕಾರಣವಾಯಿತು ಎಂಬ ಆರೋಪವೂ ಕೇಳಿಬಂದಿತ್ತು. ಸದ್ಯ ಬಂಧನದಲ್ಲಿರುವ ಐಎಂಎ ಕಂಪನಿ ಮಾಲೀಕ ಹಾಗೂ ಹಗರಣದ ಮುಖ್ಯ ಆರೋಪಿ
ಮೊಹ್ಮದ್‌ ಮನ್ಸೂರ್ ವಿಚಾರಣೆ ಸಂದರ್ಭದಲ್ಲಿ ನೀಡಿರುವ ಹೇಳಿಕೆಗಳ ಆಧಾರದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.