ADVERTISEMENT

ಆ.8ರ ವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ: ರೆಡ್‌ ಅಲರ್ಟ್‌ ಘೋಷಣೆ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2020, 10:56 IST
Last Updated 4 ಆಗಸ್ಟ್ 2020, 10:56 IST
ಬೆಂಗಳೂರಿನಲ್ಲಿ ಮಳೆ (ಸಂಗ್ರಹ ಚಿತ್ರ)
ಬೆಂಗಳೂರಿನಲ್ಲಿ ಮಳೆ (ಸಂಗ್ರಹ ಚಿತ್ರ)   

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 8ರವರೆಗೆ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆತಿಳಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ನಿರೀಕ್ಷೆ ಇರುವುದರಿಂದ ಆ.8ರವರೆಗೂ ‘ರೆಡ್‌ ಅಲರ್ಟ್’ ಘೋಷಿಸಲಾಗಿದೆ.

ಮುಂಗಾರು ಚುರುಕುಗೊಂಡಿದ್ದು ಒಳನಾಡಿನ ಬಾಗಲಕೋಟೆ, ಬೀದರ್, ಧಾರವಾಡ, ಕಲಬುರ್ಗಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಬುಧವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.