ADVERTISEMENT

ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಸೂಚನೆ

​ಪ್ರಜಾವಾಣಿ ವಾರ್ತೆ
Published 24 ಜೂನ್ 2023, 15:56 IST
Last Updated 24 ಜೂನ್ 2023, 15:56 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ವ್ಯಾಪ್ತಿಯ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ವ್ಯಾಪ್ತಿಯಲ್ಲಿ ಬಿರುಗಾಳಿ ವೇಗವು ಗಂಟೆಗೆ 45 ಕಿ.ಮೀನಿಂದ 55 ಕಿ.ಮೀ ವೇಗದಲ್ಲಿ ಬೀಸಲಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆ ಮಳೆ ಆಗಲಿದೆ.
ಶನಿವಾರ ಬೆಳಿಗ್ಗೆ 8.30ಕ್ಕೆ ಅನ್ವಯಿಸಿದಂತೆ ಕಳೆದ 24 ಗಂಟೆ ಅವಧಿಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ 14 ಸೆಂ.ಮೀ ಹಾಗೂ ಹೊನ್ನಾವರದಲ್ಲಿ 12 ಸೆಂ.ಮೀ ಗರಿಷ್ಠ ಮಳೆಯಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.