ADVERTISEMENT

ಕೋವಿಡ್‌ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ತಕ್ಷಣ ಅಗತ್ಯ ಮೂಲಸೌಕರ್ಯ

​ಪ್ರಜಾವಾಣಿ ವಾರ್ತೆ
Published 3 ಮೇ 2021, 9:56 IST
Last Updated 3 ಮೇ 2021, 9:56 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ಕೋವಿಡ್‌ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ತಕ್ಷಣ ಅಗತ್ಯ ಮೂಲಸೌಕರ್ಯದ ನೆರವು ಕಲ್ಪಿಸಲು ಐಎಎಸ್ ಅಧಿಕಾರಿ‌ ಕೆ.ಪಿ. ಮೋಹನ ರಾಜ್ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಕ‌ ಮಾಡಲಾಗಿದೆ.

ಸರ್ಕಾರ ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದು, ಕೊರೊನಾ ಸೋಂಕಿನಿಂದಾಗಿ ಸಾವು-ನೋವು ಸಂಭವಿಸುತ್ತಿದ್ದು, ಇಂತಹ ಸಂದರ್ಭದಲ್ಲಿ ತಂದೆ-ತಾಯಿ ಅಥವಾ ಪೋಷಕರನ್ನು ಕಳೆದುಕೊಂಡಂತಹ ಮಕ್ಕಳಿಗೆ ಅಗತ್ಯ ಸೌಕರ್ಯಗಳನ್ನು ಒದಗಿಸುವುದು ಅವಶ್ಯಕವಾಗಿರುತ್ತದೆ ಎಂದಿದೆ.

ಕೋವಿಡ್‌ನಿಂದ ಪೋಷಕರನ್ನು ಕಳೆದುಕೊಂಡು ಅನಾಥರಾದ ಮಕ್ಕಳಿಗೆ ಸರ್ಕಾರದಿಂದ ಅತ್ಯಾವಶ್ಯಕ ಸೌಕರ್ಯಗಳನ್ನು ಆಧ್ಯತೆಯ ಮೇರೆಗೆ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ನೋಂದಣಿ ಪರಿವೀಕ್ಷಕರು ಮತ್ತು ಮುದ್ರಾಂಕ ಆಯುಕ್ತರಾದ ಕೆ.ಪಿ. ಮೋಹನ್‌ರಾಜ್ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದೆ.

ADVERTISEMENT

ವಿಪತ್ತು ನಿರ್ವಹಣೆ ಕಾಯ್ದೆ, 2005ರ ಸೆಕ್ಷನ್ 24 (ಇ) ಮತ್ತು (ಎಲ್) ಅಡಿಯಲ್ಲಿ ಈ ಆದೇಶವನ್ನು ಹೊರಡಿಸಲಾಗಿದ್ದು, ಚತ್ಷಣವೇ ಕಾರ್ಯಪ್ರವೃತ್ತರಾಗುವಂತೆ ಆದೇಶಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.