ADVERTISEMENT

ಮಾಂಡೂಸ್‌ ಚಂಡಮಾರುತ ಪರಿಣಾಮ: ರಾಜ್ಯದಲ್ಲಿ ಮೂರು ದಿನ ಮಳೆ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2022, 2:06 IST
Last Updated 10 ಡಿಸೆಂಬರ್ 2022, 2:06 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಡಿ.10ರಿಂದ ಮೂರು ದಿನ ಮೋಡ ಮುಸುಕಿದ ವಾತಾವರಣ ಇರಲಿದ್ದು ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶಿವಮೊಗ್ಗ, ಹಾವೇರಿ, ಬಳ್ಳಾರಿ, ಚಿಕ್ಕಮಗಳೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಶನಿವಾರ ಸಾಧಾರಣ ಮಳೆ ಸುರಿಯಲಿದ್ದು ಈ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ.

ಕೋಲಾರ, ಮೈಸೂರು, ತುಮಕೂರು, ಬಾಗಲಕೋಟೆ, ರಾಯಚೂರು, ವಿಜಯಪುರ ಹಾಗೂ ಯಾದಗಿರಿಯಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.

ADVERTISEMENT

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತ ಪರಿಣಾಮ ಬೆಂಗಳೂರು, ಹಾಸನ, ಕೊಡಗಿನ ಅಲ್ಲಲ್ಲಿ ಶುಕ್ರವಾರ ತುಂತುರು ಮಳೆ ಸುರಿದಿದೆ. ಮೈಕೊರೆಯುವ ಚಳಿಯಿತ್ತು.

ಮಲೆನಾಡು ಜಿಲ್ಲೆಗಳಲ್ಲಿ ಕಾಫಿ ಕೊಯ್ಲು ನಡೆಯುತ್ತಿದ್ದು ಮಳೆ ಹಾಗೂ ಮೋಡ ಮುಸುಕಿದ ವಾತಾವರಣದಿಂದ ಕೊಯ್ಲು ಮಾಡಿದ ಕಾಫಿ ಒಣಗಿಸಲು ಸಾಧ್ಯವಾಗುತ್ತಿಲ್ಲ ಎಂದು ಕೃಷಿಕರು ಅಳಲು ತೋಡಿಕೊಂಡಿದ್ದಾರೆ. ಭತ್ತದ ಕಟಾವಿಗೂ ವಾತಾವರಣ ಅಡ್ಡಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.