ಬೆಂಗಳೂರು: ಹಾನಗಲ್ ಮತ್ತು ಸಿಂಧಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸಿ ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಉದ್ದೇಶದಿಂದ ಅಭಿಪ್ರಾಯ ಸಂಗ್ರಹಕ್ಕೆ ವೀಕ್ಷಕರನ್ನು ಕಳಿಸಲಾಗುವುದು ಎಂದು ತಿಳಿಸಿದರು.
ದಾವಣಗೆರೆಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಎರಡು ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆಯೂ ಚರ್ಚೆ ಆಗಿದೆ. ಎರಡೂ ಕ್ಷೇತ್ರಗಳ ಸ್ಥಿತಿ ಗತಿಗಳ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಲಿದ್ದಾರೆ. ರಾಜ್ಯದ ಜನತೆ ನಮ್ಮ ಜತೆ ಇದ್ದಾರೆ. ಸಶಕ್ತ ಸಂಘಟನೆ ಮತ್ತು ಕಾರ್ಯಕರ್ತರ ಪಡೆಯೂ ಇದೆ ಎಂದರು.
ಮತಾಂತರ ತಡೆಗೆ ಕಾಯ್ದೆ: ರಾಜ್ಯದಲ್ಲಿ ಬಲವಂತ ಮತ್ತು ಆಮಿಷಗಳನ್ನು ಒಡ್ಡಿ ಮತಾಂತರ ತಡೆಗೆ ಕಾಯ್ದೆಯೊಂದನ್ನು ರೂಪಿಸಲಾಗುವುದು ಎಂದು ಬೊಮ್ಮಾಯಿ ತಿಳಿಸಿದರು.
ಯಾದಗಿರಿಯಲ್ಲಿ ಮತಾಂತರ ವಿಚಾರವು ಗಮನಕ್ಕೆ ಬಂದಿದೆ. ಈ ಬಗ್ಗೆ ಗಮನ ಹರಿಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ. ಬಲವಂತ ಮತ್ತು ಆಮಿಷ ಒಡ್ಡಿ ಮತಾಂತರವನ್ನು ಒಪ್ಪಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.