
ಪ್ರಜಾವಾಣಿ ವಾರ್ತೆ
ಬೆಂಗಳೂರು: ಮಂಗಳೂರಿನಲ್ಲಿ ಭಾನುವಾರ ನಡೆದ ಕರ್ಣಾಟಕ ಬ್ಯಾಂಕಿನ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಜೊತೆಯಾಗಿ ತೆರಳಿದರು.
ಕಾಂಗ್ರೆಸ್ ಕಡೆ ಮುಖ ಮಾಡಿರುವ ಸೋಮಶೇಖರ್, ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಜೊತೆ ಚರ್ಚೆ ನಡೆಸಿದ್ದಾರೆ. ಆದರೆ, ಕಾಂಗ್ರೆಸ್ ಸೇರುವ ಬಗ್ಗೆ ಬಹಿರಂಗವಾಗಿ ಅವರು ಎಲ್ಲಿಯೂ ಮಾತನಾಡಿಲ್ಲ.
ಮಂಗಳೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ಡಿ.ಕೆ. ಶಿವಕುಮಾರ್ ಮತ್ತು ಸೋಮಶೇಖರ್ ಅವರು ವಿಶೇಷ ವಿಮಾನದಲ್ಲಿ ತೆರಳಿದರು. ಕಾರ್ಯಕ್ರಮ ಮುಗಿದ ಬಳಿಕ ಅದೇ ವಿಮಾನದಲ್ಲಿ ಮರಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.