ADVERTISEMENT

ವೈದ್ಯರ ಗ್ರಾಮೀಣ ಸೇವೆ 5 ವರ್ಷಕ್ಕೆ ಹೆಚ್ಚಿಸಿ: ಸಿದ್ದಯ್ಯ ಸಾಮಂತ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2021, 22:36 IST
Last Updated 15 ಡಿಸೆಂಬರ್ 2021, 22:36 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ‘ವೈದ್ಯಕೀಯ ಶಿಕ್ಷಣ ಮುಗಿಸಿದವರು ಹಳ್ಳಿಗಳಲ್ಲಿ ಸೇವೆ ಸಲ್ಲಿಸುವುದನ್ನು ಐದು ವರ್ಷಗಳಿಗೆ ಹೆಚ್ಚಿಸಬೇಕು’ ಎಂದು ಭಾರತೀಯ ಜನ ರಕ್ಷಣಾ ಸೇನಾದ ರಾಷ್ಟ್ರೀಯ ಅಧ್ಯಕ್ಷ ಸಿದ್ದಯ್ಯ ಸಾಮಂತ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ವೆಚ್ಚ ಭರಿಸಲು ಸಾಧ್ಯವಾಗದ ಕಾರಣ ಹಳ್ಳಿಗಳಲ್ಲಿನ ಶೇ 70ರಷ್ಟು ಜನ ಸರ್ಕಾರಿ ಆಸ್ಪತ್ರೆಯನ್ನೇ ಅವಲಂಭಿಸಿದ್ದಾರೆ. ಸರ್ಕಾರಿ ಆಸ್ಪತ್ರೆಗಳ ವೈದ್ಯರು ಬಡ ರೋಗಿಗಳ ಚಿಕಿತ್ಸೆಗೆ ಕಾಳಜಿ ವಹಿಸುತ್ತಿಲ್ಲ’ ಎಂದರು.

‘ಸರ್ಕಾರಿ ಆಸ್ಪತ್ರೆಗಳಲ್ಲಿ ಬಡರೋಗಿಗಳಿಗೆ ಉತ್ತಮ ಗುಣ ಮಟ್ಟದ ಉಚಿತ ಆಹಾರ ನೀಡಬೇಕು. ಬಡ ರೋಗಿಗಳಿಗೆ ಉಚಿತ ಸೇವೆಗಳನ್ನು ನೀಡಬೇಕು’ ಎಂದೂ ಒತ್ತಾಯಿಸಿದರು.

ADVERTISEMENT

‘ವೈದ್ಯರು ಖಾಸಗಿಯಾಗಿ ಪ್ರಾಕ್ಟೀಸ್‌ ನಡೆಸಲು ಸರ್ಕಾರದ ಅನುಮತಿ ಪಡೆಯಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರು 2018 ಮೇ 24ರಂದು ಹೊರಡಿಸಿದ್ದ ಆದೇಶವನ್ನು ಪರಿಷ್ಕರಿಸಲಾಗಿದೆ. ಕರ್ತವ್ಯದ ಅವಧಿ ಮುಗಿದ ನಂತರ ಖಾಸಗಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಬಹುದು ಎಂದು ಪರಿಷ್ಕೃತ ಆದೇಶ ಹೇಳುತ್ತದೆ. ದಿನದಲ್ಲಿ ಎರಡು ಮೂರು ಗಂಟೆ ಮಾತ್ರ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ತುರ್ತು ಸಂದರ್ಭದಲ್ಲಿ ವೈದ್ಯರು ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.