ADVERTISEMENT

ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಳ: ಬಿ.ವೈ.ವಿಜಯೇಂದ್ರ

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2024, 15:39 IST
Last Updated 29 ಆಗಸ್ಟ್ 2024, 15:39 IST
ಬೆಂಗಳೂರಿನ ಮಲ್ಲೇಶ್ವರದ ಜಗನ್ನಾಥ ಭವನದಲ್ಲಿ ಗುರುವಾರ ಬಿಜೆಪಿ ಮಹಿಳಾ ಮೋರ್ಚಾದ ರಾಜ್ಯಮಟ್ಟದ ಕಾರ್ಯಾಗಾರದಲ್ಲಿ ರಾಜ್ಯ ಮತ್ತು ಜಿಲ್ಲಾ ಮಟ್ಟದ ಪದಾಧಿಕಾರಿಗಳು ಭಾಗವಹಿಸಿದರು ಪ್ರಜಾವಾಣಿ ಚಿತ್ರ.
ಬೆಂಗಳೂರಿನ ಮಲ್ಲೇಶ್ವರದ ಜಗನ್ನಾಥ ಭವನದಲ್ಲಿ ಗುರುವಾರ ಬಿಜೆಪಿ ಮಹಿಳಾ ಮೋರ್ಚಾದ ರಾಜ್ಯಮಟ್ಟದ ಕಾರ್ಯಾಗಾರದಲ್ಲಿ ರಾಜ್ಯ ಮತ್ತು ಜಿಲ್ಲಾ ಮಟ್ಟದ ಪದಾಧಿಕಾರಿಗಳು ಭಾಗವಹಿಸಿದರು ಪ್ರಜಾವಾಣಿ ಚಿತ್ರ.   

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ಹೆಚ್ಚಾಗಿದೆ. ಅದನ್ನು ತಡೆಯದೇ ಸರ್ಕಾರ ಮೌನ ವಹಿಸಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ದೂರಿದರು.

ಬಿಜೆಪಿ ಮಹಿಳಾ ಮೋರ್ಚಾದ ರಾಜ್ಯ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿದ ಅವರು, ಮಹಿಳಾ ದೌರ್ಜನ್ಯದ ಸಂದರ್ಭದಲ್ಲೂ ಸರ್ಕಾರ ಬೇಜವಾಬ್ದಾರಿಯಿಂದ ವರ್ತಿಸುತ್ತಿದೆ ಎಂದು ಹೇಳಿದರು.

‘ಈ ಸರ್ಕಾರದ ಬಗ್ಗೆ ಜನ ಬೇಸತ್ತು ಹೋಗಿದ್ದು ಹಿಡಿ ಶಾಪ ಹಾಕುತ್ತಿದ್ದಾರೆ. ಇದೊಂದು ಜನ ವಿರೋಧಿ ಸರ್ಕಾರ. ಇದರ ವಿರುದ್ಧ ನಿರಂತರ ಹೋರಾಟ ಅನಿವಾರ್ಯ. ಚುನಾವಣೆ ಬಂದಾಗ ಮಾತ್ರ ಹೋರಾಟ ಮಾಡಿದರೆ ಅದು ಜನತೆಗೆ ಮಾಡಿದ ಅವಮಾನ ಮತ್ತು ಅನ್ಯಾಯ. ರಾಜ್ಯದ ಚುಕ್ಕಾಣಿ ಹಿಡಿದವರು ಜನ ವಿರೋಧಿ ನೀತಿಗಳನ್ನು ಅನುಸರಿಸುತ್ತಾರೋ ಆಗ, ಜನರ ಪರವಾಗಿ ಹೋರಾಡುವುದು ನಮ್ಮ ಕರ್ತವ್ಯ’ ಎಂದರು.

ADVERTISEMENT

ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಕೆ.ಮಂಜುಳಾ ಮಾತನಾಡಿ, ಮಹಿಳೆಯರ ಮೇಲೆ ದೌರ್ಜನ್ಯ ನಡೆದಾಗ ನಿರ್ದಾಕ್ಷಿಣ್ಯ ಕ್ರಮ ಅಗತ್ಯ. ಆಗ ದುಷ್ಟರು, ದುರುಳರು, ಕ್ರಿಮಿನಲ್‌ಗಳು ಮನೆ ಸೇರಿಕೊಳ್ಳುತ್ತಾರೆ ಎಂದು ಹೇಳಿದರು.

ಸಭೆಯಲ್ಲಿ ಮಹಿಳಾ ಮೋರ್ಚಾ ರಾಜ್ಯ ಉಸ್ತುವಾರಿ ಸೋನಲ್‌ ಬೆನ್‌ ಪಟೇಲ್‌, ವಿಧಾನಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌, ಡಾ. ಶೋಭಾ, ಮಹಿಳಾ ಮೋರ್ಚಾ ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.