
ಪ್ರಜಾವಾಣಿ ವಾರ್ತೆ
ನವದೆಹಲಿ: ಮೆಕ್ಕೆಜೋಳ ಆಮದು ನಿರ್ಬಂಧಿಸಿ, ಖರೀದಿ ಕೇಂದ್ರಗಳನ್ನು ಹೆಚ್ಚಿಸಬೇಕು ಎಂದು ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಆಗ್ರಹಿಸಿದರು. ರಾಜ್ಯದಲ್ಲಿ ಮೆಕ್ಕೆಜೋಳ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಲೋಕಸಭೆಯ ಶೂನ್ಯ ವೇಳೆಯಲ್ಲಿ ಗುರುವಾರ ಪ್ರಸ್ತಾಪಿಸಿದ ಅವರು, ರಾಜ್ಯದಲ್ಲಿ 32 ಲಕ್ಷ ಟನ್ ಮೆಕ್ಕೆಜೋಳ ಬೆಳೆಯಲಾಗಿದೆ. ಕನಿಷ್ಠ ಬೆಂಬಲ ಬೆಲೆಯನ್ನು ಕ್ವಿಂಟಲ್‌ಗೆ ₹2,400 ನಿಗದಿಪಡಿಸಲಾಗಿದೆ. ಆದರೆ, ಆ ಬೆಲೆಗೆ ಮಾರಾಟ ಆಗುತ್ತಿಲ್ಲ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ, ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ ರೈತರಿಗೆ ನ್ಯಾಯ ಕೊಡಿಸಬೇಕು’ ಎಂದು ಮನವಿ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.