ಬೆಂಗಳೂರು: ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಅವರ ಬದಲಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರಿಗೆ ಆಗಸ್ಟ್ 15ರ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಧ್ವಜಾರೋಹಣದ ಹೊಣೆ ವಹಿಸಲಾಗಿದೆ.
ಆಗಸ್ಟ್ 15 ಸ್ವಾತಂತ್ರ್ಯೋತ್ಸವ ದಿನಾಚರಣೆಯ ಭಾಗವಾಗಿ ನಡೆಯಲಿರುವ ಧ್ವಜಾರೋಹಣದ ಸಂಬಂಧ ಸರ್ಕಾರವು ಆದೇಶ ಹೊರಡಿಸಿದೆ. ಬಳ್ಳಾರಿ ಜಿಲ್ಲೆಯಲ್ಲಿನ ಧ್ವಜಾರೋಹಣದ ಜವಾಬ್ದಾರಿಯನ್ನು ಪೌರಾಡಳಿತ ಸಚಿವ ರಹೀಂ ಖಾನ್ ಅವರಿಗೆ ನೀಡಲಾಗಿದೆ.
ಈ ಬೆಳವಣಿಗೆಯ ಬೆನ್ನಲ್ಲೇ, ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅರಸೀಕೆರೆಯ ಕಾಂಗ್ರೆಸ್ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರು, ‘ಹಾಸನ ಜಿಲ್ಲೆಯ ನೂತನ ಉಸ್ತುವಾರಿ ಸಚಿವರಾಗಿರುವ ಕೃಷ್ಣೆಬೈರೇಗೌಡ ಅವರಿಗೆ ಶುಭಾಶಯ’ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.