ADVERTISEMENT

ಯುಎಇ ಅಧ್ಯಕ್ಷ ಶೇಖ್‌ ಖಲೀಫಾ ಗೌರವಾರ್ಥ ರಾಜ್ಯದಲ್ಲಿ ಒಂದು ದಿನ ಶೋಕಾಚರಣೆ

​ಪ್ರಜಾವಾಣಿ ವಾರ್ತೆ
Published 14 ಮೇ 2022, 5:12 IST
Last Updated 14 ಮೇ 2022, 5:12 IST
ಶೇಕ್ ಖಲೀಫಾ ಬಿನ್ ಜಾಯೆದ್‌ ಅಲ್ ನಹ್ಯಾನ್
ಶೇಕ್ ಖಲೀಫಾ ಬಿನ್ ಜಾಯೆದ್‌ ಅಲ್ ನಹ್ಯಾನ್   

ಬೆಂಗಳೂರು: ಶುಕ್ರವಾರ ನಿಧನರಾಗಿರುವ ಅರಬ್‌ ಸಂಯುಕ್ತ ಸಂಸ್ಥಾನಗಳ (ಯುಎಇ) ಅಧ್ಯಕ್ಷ ಮತ್ತು ಅಬುಧಾಬಿಯ ಆಡಳಿತಗಾರ ಶೇಖ್‌ ಖಲೀಫಾ ಬಿನ್‌ ಜಾಯೆದ್‌ ಅಲ್‌ ನಹ್ಯಾನ್‌ ಗೌರವಾರ್ಥ ರಾಜ್ಯದಾದ್ಯಂತ ಶನಿವಾರ ಒಂದು ದಿನದ ಮಟ್ಟಿಗೆ ಶೋಕಾಚರಣೆ ಘೋಷಿಸಲಾಗಿದೆ.

ಶೇಖ್‌ ಖಲೀಫಾ ದುಬೈನಲ್ಲಿ ನಿಧನರಾಗಿದ್ದರು. ಅವರ ಗೌರವಾರ್ಥ ಒಂದು ದಿನ ಶೋಕಾಚರಣೆ ಘೋಷಿಸಲಾಗಿದೆ. ಶನಿವಾರ ಇಡೀ ದಿನ ರಾಜ್ಯದಾದ್ಯಂತ ಯಾವುದೇ ಅಧಿಕೃತ ಮನರಂಜನಾ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ. ನಿಯಮಿತವಾಗಿ ರಾಷ್ಟ್ರಧ್ವಜವನ್ನು ಹಾರಿಸುವ ಸರ್ಕಾರದ ಎಲ್ಲ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಶಿಷ್ಟಾಚಾರ ವಿಭಾಗ ಆದೇಶ ಹೊರಡಿಸಿದೆ.

2004ರ ನವೆಂಬರ್‌ 3ರಿಂದ ಶೇಖ್‌ ಖಲೀಫಾ ಯುಎಇ ಅಧ್ಯಕ್ಷರಾಗಿದ್ದರು.

ADVERTISEMENT

ಯುಎಇಅಧ್ಯಕ್ಷೀಯ ವ್ಯವಹಾರಗಳ ಸಚಿವಾಲಯವು, ಶೇಖ್‌ ಖಲೀಫಾಅವರ ನಿಧನಕ್ಕೆ ಸಂತಾಪ ಸೂಚಿಸಿ 40 ದಿನಗಳ ಶೋಕಾಚರಣೆಯನ್ನು ಘೋಷಿಸಿದೆ ಎಂದು 'ಖಲೀಜಾ ಟೈಮ್ಸ್‌' ವರದಿ ಮಾಡಿದೆ.

ಸಂತಾಪ ಸೂಚಕವಾಗಿ ಬಾವುಟಗಳನ್ನು ಅರ್ಧಕ್ಕೆ ಇಳಿಸಲಾಗುತ್ತದೆ. ಸಚಿವಾಲಯದ ಕಚೇರಿಗಳು, ಸರ್ಕಾರಿ ಇಲಾಖೆಗಳು, ಬ್ಯಾಂಕ್‌ಗಳು ಮತ್ತು ಸ್ಥಳೀಯ ಸಂಸ್ಥೆಗಳು ಶುಕ್ರವಾರದಿಂದ 40 ದಿನಗಳ ಕಾಲ ಸೇವೆ ಸ್ಥಗಿತ ಮಾಡಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.