ADVERTISEMENT

ಲಸಿಕೆ ಅಭಿಯಾನಕ್ಕೆ ಒಂದು ವರ್ಷ | ಇದುವರೆಗೆ 156.76 ಕೋಟಿ ಡೋಸ್‌ ವಿತರಣೆ: ಬಿಜೆಪಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಜನವರಿ 2022, 9:28 IST
Last Updated 16 ಜನವರಿ 2022, 9:28 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ದೇಶದಲ್ಲಿ ಇದುವರೆಗೆ ಬರೋಬ್ಬರಿ156.76 ಕೋಟಿಗೂ ಅಧಿಕ ಡೋಸ್‌ ಕೋವಿಡ್‌ ತಡೆ ಲಸಿಕೆ ವಿತರಿಸಲಾಗಿದೆ ಎಂದು ಕರ್ನಾಟಕ ಬಿಜೆಪಿ ಘಟಕವು ತಿಳಿಸಿದೆ.

ದೇಶದಲ್ಲಿ ಕೋವಿಡ್‌ ತಡೆ ಲಸಿಕೆ ಅಭಿಯಾನ ಆರಂಭವಾಗಿ ಒಂದು ವರ್ಷ ಕಳೆದಿರುವ ಹಿನ್ನೆಲೆಯಲ್ಲಿ ಸರಣಿ ಟ್ವೀಟ್‌ಗಳನ್ನು ಮಾಡಿರುವ ʼಬಿಜೆಪಿ ಕರ್ನಾಟಕʼ,ವಿಶ್ವದ ಅತಿ ದೊಡ್ಡ ಲಸಿಕಾ ಅಭಿಯಾನದಲ್ಲಿ ಭಾರತದ ಅರ್ಹ ಜನಸಂಖ್ಯೆಯ ಶೇ 92 ರಷ್ಟು ಜನರಿಗೆ ಮೊದಲ ಡೋಸ್‌ ಲಸಿಕೆ ನೀಡಲಾಗಿದೆ.ದೇಶದ ಶೇ 70 ರಷ್ಟು ಅರ್ಹ ಜನರುಸಂಪೂರ್ಣ ಲಸಿಕೆ ಪಡೆದಿದ್ದಾರೆʼ ಎಂದು ಮಾಹಿತಿ ನೀಡಿದೆ.

ಮತ್ತೊಂದು ಟ್ವೀಟ್‌ನಲ್ಲಿ, ಭಾರತದ ಲಸಿಕಾ ಅಭಿಯಾನವು ಜಗತ್ತಿನ ಅನೇಕ ಪ್ರಮುಖ ದೇಶಗಳಿಗಿಂತ ವೇಗವಾಗಿ ನಡೆಯುತ್ತಿದೆ. ದೇಶದಲ್ಲಿ ಒಂದು ವರ್ಷದಲ್ಲಿಪ್ರತಿದಿನ ಸರಾಸರಿ 4.26 ಮಿಲಿಯನ್ (42.6 ಲಕ್ಷ) ಜನರಿಗೆ ಲಸಿಕೆ ನೀಡಲಾಗಿದೆ ಎಂದೂ ಹೇಳಿದೆ.

ADVERTISEMENT

ಯುಎಸ್‌ಎ, ಯುಕೆ, ಜರ್ಮನಿ, ಫ್ರಾನ್ಸ್‌, ರಷ್ಯಾದಂತಹ ದೇಶಗಳಿಗೆ ಹೋಲಿಸಿದರೆ, ಭಾರತದಲ್ಲಿ ಒಂದು ವರ್ಷದಲ್ಲಿ ಅತಿ ಹೆಚ್ಚು ಲಸಿಕೆ ನೀಡಲಾಗಿದೆ ಎಂದೂ ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.