ADVERTISEMENT

ದೈನಂದಿನ ಲಸಿಕೆ ನೀಡುವಿಕೆಯಲ್ಲಿ ಭಾರತ 18 ದೇಶಗಳನ್ನು ಹಿಂದಿಕ್ಕಿದೆ: ಬಿಜೆಪಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 18 ಸೆಪ್ಟೆಂಬರ್ 2021, 8:22 IST
Last Updated 18 ಸೆಪ್ಟೆಂಬರ್ 2021, 8:22 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ‘ದೈನಂದಿನ ಲಸಿಕೆ ನೀಡುವಿಕೆಯಲ್ಲಿ ಭಾರತ 18 ಪ್ರಮುಖ ದೇಶಗಳನ್ನು ಹಿಂದಿಕ್ಕಿದೆ’ ಎಂದು ಬಿಜೆಪಿ ಹೇಳಿದೆ.

ಲಸಿಕಾ ಅಭಿಯಾನ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ, ‘ದೈನಂದಿನ ಲಸಿಕಾ ಅಭಿಯಾನದಲ್ಲಿ ಭಾರತ ಜಾಗತಿಕವಾಗಿ ಅಗ್ರ ಸ್ಥಾನದಲ್ಲಿದೆ’ ಎಂದು ಹೇಳಿದೆ.

‘ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದಂದು ದೇಶವ್ಯಾಪಿಯಾಗಿ 2.50 ಕೋಟಿ ಡೋಸ್‌ಗೂ ಅಧಿಕ ಲಸಿಕೆ ವಿತರಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದೆ. ಕರ್ನಾಟಕದಲ್ಲಿ ಒಂದೇ ದಿನದಲ್ಲಿ 28.4 ಲಕ್ಷ ಡೋಸ್ ವಿತರಿಸುವ ಮೂಲಕ ಇದುವರೆಗೆ 5.14 ಕೋಟಿ ಡೋಸ್ ವಿತರಿಸಿ ಹೊಸ ಮೈಲಿಗಲ್ಲು ಸ್ಥಾಪಿಸಿದೆ’ ಎಂದು ಬಿಜೆಪಿ ಮತ್ತೊಂದು ಟ್ವೀಟ್ ಮಾಡಿದೆ.

ADVERTISEMENT

‘ಸೆ.17ರಂದು ನಡೆದ ಮೆಗಾ‌ ಲಸಿಕಾ ಮೇಳದಲ್ಲಿ ಬೆಳಗಾವಿ ಜಿಲ್ಲೆಯು ದೇಶದಲ್ಲೇ 2ನೇ ಸ್ಥಾನ ಗಳಿಸಿದೆ’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.