ADVERTISEMENT

ಪಾಕ್ ಉಗ್ರರ ನೆಲೆಗಳ ಮೇಲೆ ದಾಳಿ: ಸೀಬರ್ಡ್ ನೌಕಾನೆಲೆಯಲ್ಲಿ ಭದ್ರತೆ ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2019, 7:24 IST
Last Updated 26 ಫೆಬ್ರುವರಿ 2019, 7:24 IST
ಕಾರವಾರದ ಸೀಬರ್ಡ್ ನೌಕಾನೆಲೆಯ ಚೆಂಡಿಯಾ ಗೇಟ್ ನಲ್ಲಿ ಭದ್ರತಾ ಕಾರ್ಯದಲ್ಲಿ ನಿರತರಾಗಿರುವ ಸಿಬ್ಬಂದಿ
ಕಾರವಾರದ ಸೀಬರ್ಡ್ ನೌಕಾನೆಲೆಯ ಚೆಂಡಿಯಾ ಗೇಟ್ ನಲ್ಲಿ ಭದ್ರತಾ ಕಾರ್ಯದಲ್ಲಿ ನಿರತರಾಗಿರುವ ಸಿಬ್ಬಂದಿ   

ಕಾರವಾರ:ಪಾಕಿಸ್ತಾನದ ಬಲಾಕೋಟ್‌ನಲ್ಲಿರುವ ಉಗ್ರರ ನೆಲೆಗಳ ಮೇಲೆ ಭಾರತೀಯ ವಾಯುಪಡೆಯುದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಇಲ್ಲಿನ ಸೀಬರ್ಡ್ ನೌಕಾನೆಲೆಯಲ್ಲಿ ಸ್ಟೇಜ್ 1 ಅಲರ್ಟ್ ಘೋಷಣೆ ಮಾಡಲಾಗಿದೆ.

ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ ನೌಕಾನೆಲೆಯ ಮುಖ್ಯಸ್ಥ ಶಾಂತನು ಶರ್ಮಾ, ‘ನೌಕಾನೆಲೆಯಲ್ಲಿ ಭದ್ರತೆಯನ್ನು ಎಂದಿಗಿಂತ ಹೆಚ್ಚಿಸಲಾಗಿದೆ. ಹಲವು ಗೇಟ್‌ಗಳಲ್ಲಿ ಪ್ರವೇಶ ನಿರ್ಬಂಧಿಸಲಾಗಿದೆ. ಅಗತ್ಯ ಕಾರ್ಯಗಳಿಗೆ ಬರುವವರನ್ನು ತೀವ್ರ ತಪಾಸಣೆ ಮಾಡಲಾಗುತ್ತಿದೆ’ಎಂದು ತಿಳಿಸಿದರು.

ಶಿರಸಿಯಲ್ಲಿವಿಜಯೋತ್ಸವ

ADVERTISEMENT

ಉಗ್ರರ ನೆಲೆಯ ಮೇಲೆ ಭಾರತದ ಸೈನಿಕರು ವೈಮಾನಿಕ ದಾಳಿ ನಡೆಸಿರುವ ವಿಷಯ ಬಿತ್ತರವಾಗುತ್ತಿದ್ದಂತೆ ಶಿರಸಿಯಲ್ಲಿ ಬಿಜೆಪಿ ಹಾಗೂ ಹಿಂದುತ್ವಪರ ಸಂಘಟನೆಗಳು ವಿಜಯೋತ್ಸವ ಆಚರಿಸಿದವು.

ಪಟಾಕಿ ಸಿಡಿಸಿ, ತಮಟೆ ಬಾರಿಸಿ, ಜನರಿಗೆ ಸಿಹಿ ಹಂಚಿದ ಕಾರ್ಯಕರ್ತರು, ಉಗ್ರವಾದದ ವಿರುದ್ಧ ಭಾರತ ದಿಟ್ಟ ಉತ್ತರ ನೀಡಿದೆ ಎಂದುಸಂಭ್ರಮಿಸಿದರು.ನಗರದ ಪ್ರಮುಖ ಬೀದಿಗಳಲ್ಲಿ ವಿಜಯೋತ್ಸವ ಮೆರವಣಿಗೆ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.