ADVERTISEMENT

India Pakistan Tensions | ನಾಗರಿಕರ ರಕ್ಷಣೆ: ಸಿ.ಎಂ ಸಭೆ ಇಂದು

​ಪ್ರಜಾವಾಣಿ ವಾರ್ತೆ
Published 9 ಮೇ 2025, 23:30 IST
Last Updated 9 ಮೇ 2025, 23:30 IST
<div class="paragraphs"><p>ಸಿದ್ದರಾಮಯ್ಯ</p></div>

ಸಿದ್ದರಾಮಯ್ಯ

   

ಬೆಂಗಳೂರು: ರಾಜ್ಯದಲ್ಲಿ ನಾಗರಿಕ ರಕ್ಷಣಾ ಕಾರ್ಯ ಚಟುವಟಿಕೆಗಳನ್ನು ಪರಾಮರ್ಶಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ (ಮೇ 10) ಸಂಜೆ 4ಕ್ಕೆ ಮಹತ್ವದ ಸಭೆ ಕರೆದಿದ್ದಾರೆ.

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆಯುವ ಸಭೆಯಲ್ಲಿ ರಾಜ್ಯದ ಹಿರಿಯ ಪೊಲೀಸ್‌ ಅಧಿಕಾರಿಗಳು, ಸರ್ಕಾರದ ಪ್ರಮುಖರು ಭಾಗವಹಿಸುವರು. ಇದೇ ಸಮಯದಲ್ಲಿ ಎಲ್ಲ ಮಹಾನಗರಗಳ ಪೊಲೀಸ್‌ ಆಯುಕ್ತರು, ಜಿಲ್ಲಾ ಪೊಲೀಸ್‌ ವರಿಷ್ಠರು, ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ವಿಡಿಯೊ ಕಾನ್ಫರೆನ್ಸ್‌ ಮೂಲಕ ಭಾಗವಹಿಸುವರು.

ADVERTISEMENT

ಭಾರತ–ಪಾಕಿಸ್ತಾನ ನಡುವಿನ ಯುದ್ಧದ ವಾತಾವರಣ, ಭಯೋತ್ಪಾದಕ ಸಂಘಟನೆಗಳ ಚಟುವಟಿಕೆ ವಿರುದ್ಧ ರಾಜ್ಯದಲ್ಲಿ ಕೈಗೊಳ್ಳಬೇಕಾದ ಕ್ರಮಗಳು, ನಾಗರಿಕರ ಸುರಕ್ಷತೆಗಾಗಿ ತೆಗೆದುಕೊಳ್ಳುವ ಮುಂಜಾಗ್ರತಾ ಕ್ರಮಗಳು, ಕಾನೂನು ಸುವ್ಯವಸ್ಥೆ ಕುರಿತು ಸಭೆಯಲ್ಲಿ ಚರ್ಚಿಸಿ, ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಕಚೇರಿ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.