ಮಂಗಳೂರಿನಲ್ಲಿ ಭಾರತ್ ಫೌಂಡೇಷನ್ ಆಶ್ರಯದಲ್ಲಿ ಹಮ್ಮಿಕೊಂಡ ಎರಡು ದಿನಗಳ ಮಂಗಳೂರು ಸಾಹಿತ್ಯ ಉತ್ಸವದ ಏಳನೇ ಆವೃತ್ತಿಯಲ್ಲಿ ಸಾಹಿತಿ ಎಸ್.ಎಲ್.ಭೈರಪ್ಪ:
ಪ್ರಜಾವಾಣಿ ಚಿತ್ರ
1931 ಆಗಸ್ಟ್ 20: ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಸಂತೇಶಿವರದಲ್ಲಿ ಜನನ
1958-60: ಹುಬ್ಬಳ್ಳಿಯ ಕಾಡಸಿದ್ಧೇಶ್ವರ ಕಾಲೇಜಿನಲ್ಲಿ ಅಧ್ಯಾಪಕ
1962: ಬರೋಡದ ಸಯ್ಯಾಜಿರಾವ್ ವಿಶ್ವವಿದ್ಯಾಲಯದಕ್ಕೆ ಸಲ್ಲಿಸಿದ ‘ಸತ್ಯ ಮತ್ತು ಸೌಂದರ್ಯ’ ಮಹಾ ಪ್ರಬಂಧಕ್ಕೆ ಪಿಎಚ್.ಡಿ ಪದವಿ
1960-66: ಗುಜರಾತಿನ ಸರ್ದಾರ್ ಪಟೇಲ್ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕ
1961: ‘ಧರ್ಮಶ್ರೀ’ ಮೊದಲ ಕಾದಂಬರಿ ಪ್ರಕಟ
1966: ‘ವಂಶವೃಕ್ಷ’ ಕಾದಂಬರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
1967-1971 ನವದೆಹಲಿಯ ರಾಷ್ಟ್ರೀಯ ಶಿಕ್ಷಣ ಮತ್ತು ತರಬೇತಿ ಶಿಕ್ಷಣ ಸಂಸ್ಥೆಯಲ್ಲಿ ಸಹ ಪ್ರಾಧ್ಯಾಪಕ
1975: ‘ದಾಟು’ ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
1991: ಮೈಸೂರಿನ ಪ್ರಾದೇಶಿಕ ಶಿಕ್ಷಣ ಕಾಲೇಜಿನ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿ ನಿವೃತ್ತಿ
1996: ‘ಭಿತ್ತಿ’ ಆತ್ಮಕಥನ ಪ್ರಕಟ
1999: ಕನಕಪುರದಲ್ಲಿ ನಡೆದ 67ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
2005: ಕರ್ನಾಟಕ ಸರ್ಕಾರ ನೀಡುವ ಪಂಪ ಪ್ರಶಸ್ತಿ
2007: ಗುಲಬರ್ಗಾ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್
2010: ‘ಸರಸ್ವತಿ ಸಮ್ಮಾನ್’ ಪ್ರಶಸ್ತಿ
2011: ಕನ್ನಡ ವಿಶ್ವ ವಿದ್ಯಾಲಯದ ‘ನಾಡೋಜ’ ಗೌರವ ಪದವಿ
2014: ಬೆಟಗೇರಿ ಕೃಷ್ಣಶರ್ಮ ಪ್ರಶಸ್ತಿ
2014: ನ್ಯಾಷನಲ್ ರೀಸರ್ಚ್ ಫ್ರೊಫೆಸರ್
2017: ಕನ್ನಡ ಸಾಹಿತ್ಯ ಪರಿಷತ್ತಿನ ‘ನೃಪತುಂಗ ಪ್ರಶಸ್ತಿ’
2015: ಸಾಹಿತ್ಯ ಅಕಾಡೆಮಿ ಫೆಲೋಶಿಪ್ ಗೌರವಕ್ಕೆ ಭಾಜನ
2016: ‘ಪದ್ಮಶ್ರೀ ಪ್ರಶಸ್ತಿ’ಗೆ ಭಾಜನ
2023: ‘ಪದ್ಮಭೂಷಣ ಪ್ರಶಸ್ತಿ’ ಗೌರವ
ಪ್ರಮುಖ ಕಾದಂಬರಿಗಳು
ಮತದಾನ, ವಂಶವೃಕ್ಷ (1965), ಜಲಪಾತ (1967), ನಾಯಿನೆರಳು (1968), ತಬ್ಬಲಿಯು ನೀನಾದೆ ಮಗನೆ (1970), ಗೃಹಭಂಗ (1970), ನಿರಾಕರಣ (1971), ಗ್ರಹಣ (1972), ದಾಟು (1973), ಅನ್ವೇಷಣ (1976), ಪರ್ವ (1979), ನೆಲೆ (1983), ಸಾಕ್ಷಿ (1986), ಅಂಚು (1990), ತಂತು (1993), ಸಾರ್ಥ (1998), ಮಂದ್ರ (2002), ಆವರಣ (2007), ಕವಲು (2010), ಯಾನ (2014), ಉತ್ತರಕಾಂಡ (2017)
ಚಲನಚಿತ್ರವಾಗಿರುವ ಕಾದಂಬರಿಗಳು
ವಂಶವೃಕ್ಷ - 1972 l ತಬ್ಬಲಿಯು ನೀನಾದೆ ಮಗನೆ- 1977 l ಮತದಾನ- 2001 l ನಾಯಿ ನೆರಳು- 2006
ಕಿರುತೆರೆ ಧಾರಾವಾಹಿಯಾದ ಕಾದಂಬರಿಗಳು
ಗೃಹಭಂಗ l ದಾಟು (ಹಿಂದಿ)
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.