ಸಿದ್ದರಾಮಯ್ಯ
ಬೆಂಗಳೂರು: 1991ರ ಲೋಕಸಭೆ ಚುನಾವಣೆಯಲ್ಲಿ ನನ್ನನ್ನು ಮೋಸದಿಂದ ಸೋಲಿಸಲಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್ ಅವರ ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಮಾತನಾಡಿದ್ದಾರೆ.
ಅಲ್ಲಿ ಮಾಡಿದ ಭಾಷಣದ ತುಣುಕನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಅವರು, ‘ನನಗೆ ಯಾವುದೇ ಕಾನೂನು ತೊಡಕು ಎದುರಾದಾಗಲೂ ಪ್ರೊ.ರವಿವರ್ಮ ಕುಮಾರ್ ಅವರ ಬಳಿ ಸಲಹೆ ಕೇಳುತ್ತೇನೆ. 1991ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ, ಮೋಸದಿಂದ ನನ್ನನ್ನು ಸೋಲಿಸಲಾಯಿತು. ಆಗ ಅದರ ವಿರುದ್ಧ ನ್ಯಾಯಾಲಯದಲ್ಲಿ ಹೋರಾಡಲು ರವಿವರ್ಮ ಅವರು ನನಗೆ ನೆರವಾಗಿದ್ದರು. ನನ್ನಂತೆಯೇ ಅನೇಕರಿಗೆ ಅವರು ಕಾನೂನು ನೆರವು ನೀಡಿದ್ದಾರೆ’ ಎಂದು ಬರೆದುಕೊಂಡಿದ್ದಾರೆ.
‘ಸಮಾಜದಲ್ಲಿ ಧ್ವನಿಯಿಲ್ಲದವರಿಗೆ ಶುಲ್ಕ ಪಡೆಯದೆಯೇ ನೆರವು ನೀಡುತ್ತಾರೆ. ಅವರ ಇಂತಹ ಒಳ್ಳೆಯ ಸಮಾಜವಾದಿ ಮನೋಭಾವ ಈಗಿನ ಯುವ ವಕೀಲರಿಗೆ ಮಾದರಿಯಾಗಿದೆ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.