ADVERTISEMENT

ಐಪಿಎಸ್ ಅಧಿಕಾರಿ ಬಿ.ದಯಾನಂದ ಕಾರಾಗೃಹ ಎಡಿಜಿಪಿ

​ಪ್ರಜಾವಾಣಿ ವಾರ್ತೆ
Published 31 ಜುಲೈ 2025, 14:18 IST
Last Updated 31 ಜುಲೈ 2025, 14:18 IST
<div class="paragraphs"><p>ಪೊಲೀಸ್</p></div>

ಪೊಲೀಸ್

   

(ಸಾಂದರ್ಭಿಕ ಚಿತ್ರ)

ಬೆಂಗಳೂರು: ಹುದ್ದೆಯ ನಿರೀಕ್ಷೆಯಲ್ಲಿದ್ದ ಹಿರಿಯ ಐಪಿಎಸ್ ಅಧಿಕಾರಿ ಬಿ.ದಯಾನಂದ ಅವರನ್ನು ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯ ಹೆಚ್ಚುವರಿ ಮಹಾನಿರ್ದೇಶಕ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ADVERTISEMENT

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತದಿಂದ 11 ಮಂದಿ ಸಾವಿಗೀಡಾದ ಘಟನೆಯ ಹಿನ್ನೆಲೆಯಲ್ಲಿ ಅಂದಿನ ಬೆಂಗಳೂರು ಪೊಲೀಸ್‌ ಕಮಿಷನರ್‌ ಆಗಿದ್ದ ದಯಾನಂದ ಅವರನ್ನು ಅಮಾನತುಗೊಳಿಸಲಾಗಿತ್ತು. ಇತ್ತೀಚೆಗಷ್ಟೇ ಸರ್ಕಾರ ಅವರ ಅಮಾನತು ಆದೇಶವನ್ನು ರದ್ದುಪಡಿಸಿತ್ತು. ಎಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರ ನಿವೃತ್ತಿಯಿಂದ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಹುದ್ದೆ ತೆರವಾಗಿತ್ತು.

ಕಾಲ್ತುಳಿತ ಪ್ರಕರಣದಲ್ಲಿ ಶೇಖರ್ ಟಿ ತೆಕ್ಕಣ್ಣವರ್ ಕೂಡ ಅಮಾನತು ಆಗಿದ್ದರು. ಈಚೆಗೆ ಅವರ ಅಮಾನತು ರದ್ದಾಗಿದ್ದು, ಅವರನ್ನು ಗುಪ್ತದಳದ ಎಸ್ಪಿ ಹುದ್ದೆ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.