ADVERTISEMENT

ಪ್ರಧಾನಿ ಮೋದಿ, ಶಾ ಕುರಿತಾದ ವ್ಯಂಗ್ಯಭರಿತ ವಿಡಿಯೊ ಹಂಚಿಕೊಂಡ ಕಾಂಗ್ರೆಸ್: ಹೇಳಿದ್ದೇನು?

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ಜೂನ್ 2023, 9:57 IST
Last Updated 27 ಜೂನ್ 2023, 9:57 IST
ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ
ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ   

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದಲ್ಲಿ ದ್ವೇಷವನ್ನು ಬಿತ್ತುತ್ತಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

ನರೇಂದ್ರ ಮೋದಿ ಮತ್ತು ಅಮಿತ್ ಶಾ ಕುರಿತಾದ ವ್ಯಂಗ್ಯಭರಿತ ವಿಡಿಯೊ ಹಂಚಿಕೊಂಡ ಕಾಂಗ್ರೆಸ್, ‘ದೇಶದಲ್ಲಿ ಪ್ರಜಾಪ್ರಭುತ್ವ, ಸಂವಿಧಾನದ ಮೌಲ್ಯಗಳನ್ನು ಗಂಟುಮೂಟೆ ಕಟ್ಟಿ ದ್ವೇಷವನ್ನು ಬಿತ್ತಿ, ಸರ್ವಾಧಿಕಾರವನ್ನು ಸ್ಥಾಪಿಸಲು ಬಿಜೆಪಿ ಪ್ರಯತ್ನಿಸುತ್ತಿದೆ’ ಎಂದು ಕಿಡಿಕಾರಿದೆ.

ಬಿಜೆಪಿಯ ಎಲ್ಲಾ ಪ್ರಯತ್ನಗಳನ್ನು ಪ್ರೀತಿ, ಸಹಬಾಳ್ವೆಯ ಸಂದೇಶಗಳ ಮೂಲಕ ರಾಹುಲ್ ಗಾಂಧಿ ಅವರು ಸೋಲಿಸಲಿದ್ದಾರೆ. ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆದಿದ್ದಾರೆ ಎಂದು ಕಾಂಗ್ರೆಸ್ ಬರೆದುಕೊಂಡಿದೆ.

ADVERTISEMENT

ಪ್ರಜಾಪ್ರಭುತ್ವ, ಆಡಳಿತ ವರ್ಗ, ಮಾಧ್ಯಮಗಳು ಕೇಂದ್ರ ಸರ್ಕಾರದ ಕಪಿಮುಷ್ಠಿಯಲ್ಲಿ ಸಿಲುಕಿಕೊಂಡಿವೆ ಎಂದು ಕಾಂಗ್ರೆಸ್ ದೂರಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.