ADVERTISEMENT

ಮೋದಿ ಟೀಕಿಸುವ ಭರದಲ್ಲಿ ದೇಶದ ಮರ್ಯಾದೆ ಕಳೆಯುತ್ತಿರುವ ರಾಹುಲ್‌: ಜೋಶಿ ಟೀಕೆ

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2023, 19:31 IST
Last Updated 5 ಮಾರ್ಚ್ 2023, 19:31 IST
ಪ್ರಲ್ಹಾದ ಜೋಶಿ
ಪ್ರಲ್ಹಾದ ಜೋಶಿ    

ದಾವಣಗೆರೆ: ‘ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುವ ಭರದಲ್ಲಿ ದೇಶದ ಮರ್ಯಾದೆ ಕಳೆಯುತ್ತಿದ್ದಾರೆ. ಏನು ಮಾತನಾಡುತ್ತಿದ್ದೇನೆ ಎಂಬ ಅರಿವೂ ಅವರಿಗೆ ಇದ್ದಂತಿಲ್ಲ’ ಎಂದು ಕೇಂದ್ರದ ಕಲ್ಲಿದ್ದಲು, ಗಣಿ ಹಾಗೂ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ ಜೋಶಿ ಟೀಕಿಸಿದರು.

ಭಾನುವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಅತಿ ಹೆಚ್ಚು ಟೀಕೆಗಳನ್ನು ಎದುರಿಸಿದರೂ ಮೋದಿ ಅವರು ಎಲ್ಲವನ್ನೂ ಕ್ರೀಡಾಮನೋಭಾವದಿಂದ ಸ್ವೀಕರಿಸುತ್ತಾರೆ. ಸ್ವಾತಂತ್ರ್ಯಾನಂತರ ಕಾಂಗ್ರೆಸ್‌ ಆಡಳಿತದಲ್ಲಿ ವಿವಿಧ ರಾಜ್ಯಗಳ 92 ಚುನಾಯಿತ ಸರ್ಕಾರಗಳನ್ನು ಕಿತ್ತೆಸೆದು ಅನ್ಯಾಯ ಮಾಡಿದ್ದಾರೆ. ತುರ್ತು ಪರಿಸ್ಥಿತಿ ಹೇರಿ ಪ್ರಜಾಪ್ರಭುತ್ವಕ್ಕೆ ಧಕ್ಕೆ ತಂದಿದ್ದಾರೆ. ಈಗ ಪ್ರಜಾಪ್ರಭುತ್ವದ ಕುರಿತು ಮಾತನಾಡುತ್ತಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.