ADVERTISEMENT

ದೆಹಲಿ: ಬೆಲೆ ಏರಿಕೆ ವಿರೋಧಿಸಿ ಯುವ ಕಾಂಗ್ರೆಸ್‌ ಪ್ರತಿಭಟನೆ

ಪಿಟಿಐ
Published 1 ಆಗಸ್ಟ್ 2022, 14:33 IST
Last Updated 1 ಆಗಸ್ಟ್ 2022, 14:33 IST
ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ದೆಹಲಿಯಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು –ಎಎಫ್‌ಪಿ ಚಿತ್ರ
ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ದೆಹಲಿಯಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು –ಎಎಫ್‌ಪಿ ಚಿತ್ರ   

ನವದೆಹಲಿ: ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ದಿನ ಬಳಕೆ ಆಹಾರ ಪದಾರ್ಥಗಳ ಮೇಲೆ ವಿಧಿಸಿರುವ ಜಿಎಸ್‍ಟಿ ವಿರೋಧಿಸಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಇಲ್ಲಿನ ಶಾಸ್ತ್ರಿ ಭವನದ ಮುಂಭಾಗದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

‘ಬಿಜೆಪಿ ಅಧಿಕಾರಕ್ಕೇರಿದ ಬಳಿಕ ಯುವಕರು ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆಮತ್ತು ನಿರುದ್ಯೋಗ ಸಮಸ್ಯೆ ಹೆಚ್ಚಿದೆ. ಜಿಎಸ್‌ಟಿಯಿಂದಾಗಿ ಜನರಿಗೆ ಹೊಡೆತ ಬಿದ್ದಿದೆ’ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ ಬಿ.ವಿ.ಹೇಳಿದರು.

‘ಮೊಸರು, ಪನ್ನಿರ್‌ ಮತ್ತು ಲಸ್ಸಿಯಂತಹ ಉತ್ಪನ್ನಗಳಿಗೆ ತೆರಿಗೆ ವಿಧಿಸುವ ಮೂಲಕ ನರೇಂದ್ರ ಮೋದಿ ಸರ್ಕಾರವು ಜನರನ್ನು ಲೂಟಿ ಮಾಡುತ್ತಿದೆ’ ಎಂದೂ ಅವರು ಆರೋಪಿಸಿದರು.

ADVERTISEMENT

ಕೇಂದ್ರ ಸರ್ಕಾರ ಶೀಘ್ರ ಜಿಎಸ್‌ಟಿ ನೀತಿಯಲ್ಲಿ ಸುಧಾರಣೆ ತಂದು ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡಬೇಕೆಂದು ಅವರು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.