ADVERTISEMENT

ಇಂದಿರಾ ಕ್ಯಾಂಟೀನ್‌ನಲ್ಲಿ ಮೊಟ್ಟೆ ವಿತರಣೆಗೆ ಪ್ರಸ್ತಾವ: ಸಚಿವ ರಹೀಂ ಖಾನ್‌

​ಪ್ರಜಾವಾಣಿ ವಾರ್ತೆ
Published 4 ಜೂನ್ 2025, 10:40 IST
Last Updated 4 ಜೂನ್ 2025, 10:40 IST
ರಹೀಂ ಖಾನ್‌
ರಹೀಂ ಖಾನ್‌   

ದಾವಣಗೆರೆ: ರಾಜ್ಯದ ಇಂದಿರಾ ಕ್ಯಾಂಟೀನ್‌ಗಳಲ್ಲಿ ಮಾಂಸಾಹಾರ ಪೂರೈಕೆಯ ಆಲೋಚನೆ ಇದೆ. ಈವರೆಗೂ ಇದನ್ನು ಕಾರ್ಯರೂಪಕ್ಕೆ ತರಲು ಸಾಧ್ಯವಾಗಿಲ್ಲ. ಸದ್ಯ ಮೊಟ್ಟೆ ಪೂರೈಸುವ ಪ್ರಸ್ತಾವ ಸರ್ಕಾರದ ಎದುರು ಬಂದಿದೆ ಎಂದು ಪೌರಾಡಳಿತ ಸಚಿವ ರಹೀಂ ಖಾನ್‌ ತಿಳಿಸಿದರು.

ಇಲ್ಲಿನ ಇಂದಿರಾ ಕ್ಯಾಂಟೀನ್‌ ಪರಿಶೀಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಡವರಿಗೆ ಊಟದಲ್ಲಿ ಪೋಷಕಾಂಶ ಸಿಗಬೇಕು. ಈ ನಿಟ್ಟಿನಲ್ಲಿ ಮಾಂಸಾಹಾರ ಮತ್ತು ಮೊಟ್ಟೆಗೆ ಸಾರ್ವಜನಿಕರಿಂದ ಬೇಡಿಕೆ ವ್ಯಕ್ತವಾಗಿದೆ’ ಎಂದರು.

‘ಇಂದಿರಾ ಕ್ಯಾಂಟೀನ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸಿನ ಯೋಜನೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಎರಡು ವರ್ಷದಲ್ಲಿ 186 ಹೊಸ ಇಂದಿರಾ ಕ್ಯಾಂಟೀನ್‌ಗೆ ಅನುಮೋದನೆ ನೀಡಲಾಗಿದೆ. ಇದರಲ್ಲಿ 100ಕ್ಕೂ ಅಧಿಕ ಕ್ಯಾಂಟೀನ್‌ ಪ್ರಾರಂಭವಾಗಿವೆ. ಉಳಿದ ಕ್ಯಾಂಟೀನ್‌ಗಳು ಶೀಘ್ರದಲ್ಲೇ ಕಾರ್ಯಾರಂಭ ಆಗಲಿವೆ. ಇದರಿಂದ ಜನರಿಗೆ ಅನುಕೂಲವಾಗಲಿದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.