ADVERTISEMENT

ಸಿ.ಟಿ. ರವಿ ಹೇಳಿಕೆಗೆ ಕಾರ್ಣಿಕ್‌ ಬೆಂಬಲ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2021, 19:05 IST
Last Updated 14 ಆಗಸ್ಟ್ 2021, 19:05 IST
ಗಣೇಶ್ ಕಾರ್ಣಿಕ್‌
ಗಣೇಶ್ ಕಾರ್ಣಿಕ್‌   

ಬೆಂಗಳೂರು: ಸರ್ಕಾರಿ ವೆಚ್ಚದಲ್ಲಿ ನಡೆಯುತ್ತಿರುವ ಇಂದಿರಾ ಕ್ಯಾಂಟೀನ್‌ಗಳ ಹೆಸರನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್‌ ಎಂಬುದಾಗಿ ಬದಲಿಸುವಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ನೀಡಿರುವ ಹೇಳಿಕೆಯನ್ನು ಬೆಂಬಲಿಸುವುದಾಗಿ ಬಿಜೆಪಿ ರಾಜ್ಯ ಘಟಕದ ವಕ್ತಾರ ಗಣೇಶ್‌ ಕಾರ್ಣಿಕ್‌ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿ, ವಾಕ್‌ ಸ್ವಾತಂತ್ರ್ಯವನ್ನೇ ದಮನ ಮಾಡಿದ್ದ ನಾಯಕಿಯ ಹೆಸರಿನಲ್ಲಿ ಬಡವರಿಗಾಗಿ ಯೋಜನೆಗಳನ್ನು ಘೋಷಿಸುವುದು ಎಷ್ಟು ಸರಿ? ಒಂದು ಕುಟುಂಬದ ಸದಸ್ಯರ ಹೆಸರಿನಲ್ಲಿ 600ಕ್ಕೂ ಹೆಚ್ಚು ಯೋಜನೆಗಳು, ಸಂಸ್ಥೆಗಳು, ವಿಶ್ವವಿದ್ಯಾಲಯಗಳು, ಕ್ರೀಡಾಂಗಣಗಳು ಇವೆ. ಇದು ಕಾಂಗ್ರೆಸ್‌ ಪಕ್ಷದ ಬೌದ್ಧಿಕ ದಿವಾಳಿತನ ಮತ್ತು ಗುಲಾಮಿ ಮನಸ್ಥಿತಿಗೆ ಸಾಕ್ಷಿ’ ಎಂದು ಟೀಕಿಸಿದ್ದಾರೆ.

ನಾಡಿನ ಜನರು ಬಯಸುತ್ತಿರುವ ಬದಲಾವಣೆಗೆ ಪೂರಕವಾಗಿ ಸಿ.ಟಿ. ರವಿ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್‌ ಪಕ್ಷವು ತನ್ನ ಸ್ವಾರ್ಥಕ್ಕಾಗಿ ಒಂದೇ ಕುಟುಂಬದ ಸದಸ್ಯರ ಹೆಸರನ್ನು ಎಲ್ಲದಕ್ಕೂ ನಾಮಕರಣ ಮಾಡುತ್ತಾ ಬಂದಿದೆ. ಪ್ರಜಾಪ್ರಭುತ್ವ ವಿರೋಧಿಯಾದ ಈ ನಡೆಯನ್ನು ಬಿಜೆಪಿ ಖಂಡಿಸುತ್ತದೆ ಎಂದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.