ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಎಎವೈ ಮತ್ತು ಪಿಎಚ್‌ಎಚ್ ಪಡಿತರ ಫಲಾನುಭವಿಗಳಿಗೆ ಇನ್ನು ಮುಂದೆ 5 ಕೆ.ಜಿ ಅಕ್ಕಿ ಜತೆ 5 ಕೆ.ಜಿ ‘ಇಂದಿರಾ ಆಹಾರ ಕಿಟ್’ ನೀಡಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಇಂದಿರಾ ಆಹಾರ ಕಿಟ್‌ನಲ್ಲಿ 2 ಕೆ.ಜಿ.ತೊಗರಿಬೇಳೆ, 1 ಕೆ.ಜಿ ಅಡುಗೆ ಎಣ್ಣೆ, 1 ಕೆ.ಜಿ ಸಕ್ಕರೆ ಮತ್ತು 1 ಕೆ.ಜಿ ಉಪ್ಪು ವಿತರಿಸಲಾಗುವುದು. ಹೆಚ್ಚುವರಿ 5 ಕೆ.ಜಿ ಅಕ್ಕಿ ಬದಲಿಗೆ ಆಹಾರ ಕಿಟ್ ನೀಡಲು ತೀರ್ಮಾನಿಸಲಾಗಿದೆ.
ಇದಕ್ಕೆ ₹61.19 ಕೋಟಿ ನಿಗದಿ ಮಾಡಲಾಗಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.