ADVERTISEMENT

ಚಿಕಿತ್ಸೆಗೆ ಶಾಸಕರು, ಸಂಸದ ಹಾಗೂ ಸಚಿವರಿಂದ ವೈಯಕ್ತಿಕ ಸಹಾಯ

ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2018, 3:06 IST
Last Updated 15 ಡಿಸೆಂಬರ್ 2018, 3:06 IST
ಕೊಳ್ಳೇಗಾಲ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ,ಶನಿವಾರ ಭೇಟಿ ನೀಡಿ ಸಾಂತ್ವನ ಹೇಳಿದರು
ಕೊಳ್ಳೇಗಾಲ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ,ಶನಿವಾರ ಭೇಟಿ ನೀಡಿ ಸಾಂತ್ವನ ಹೇಳಿದರು   

ಚಾಮರಾಜನಗರ: ಹನೂರು ತಾಲ್ಲೂಕಿನ ಸುಳ್ವಾಡಿಗ್ರಾಮದ ಕಿಚ್‌ಕುತ್ ಮಾರಮ್ಮ ದೇವಾಲಯದ ಗೋಪುರ ನಿರ್ಮಾಣ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಶುಕ್ರವಾರ ನೀಡಲಾದ ಪ್ರಸಾದ (ತರಕಾರಿ ಬಾತ್‌) ಸೇವಿಸಿ ಮೃತಪಟ್ಟವರ ಸಂಬಂಧಿಕರು ಮತ್ತು ಅಸ್ವಸ್ಥರಾದವರನ್ನು ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಶನಿವಾರ ಕೊಳ್ಳೇಗಾಲ ಆಸ್ಪತ್ರೆಯಲ್ಲಿ ಭೇಟಿಯಾಗಿ ಸಾಂತ್ವನ ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವರ ಜೊತೆಗೆ ಸಂಸದ ಆರ್. ಧ್ರುವನಾರಾಯಣ ಸಹ ಇದ್ದರು. ಮೃತರ ಕುಟುಂಬಕ್ಕೆಕೆಪಿಸಿಸಿ ವತಿಯಿಂದ ತಲಾ₹50,000 ನೀಡುವುದಾಗಿ ದಿನೇಶ್ ಗುಂಡೂರಾವ್ ಘೋಷಿಸಿದ್ದಾರೆ.

ಕೊಳ್ಳೇಗಾಲ ಆಸ್ಪತ್ರೆಯಲ್ಲಿ ಈವರೆಗೆ ಒಟ್ಟು 94 ಅಸ್ವಸ್ಥರಿಗೆ‌ ಚಿಕಿತ್ಸೆ ನೀಡಲಾಗಿದೆ.ಗಂಭೀರ ಸ್ಥಿತಿಯಲ್ಲಿದ್ದವರನ್ನು ತುರ್ತಾಗಿ ಮೈಸೂರಿಗೆ ಕಳಿಸಲಾಯಿತು.ಈಗ ಕೊಳ್ಳೇಗಾಲ ಮತ್ತು ಕಾಮಗೆರೆ ಆಸ್ಪತ್ರೆಯಲ್ಲಿ ಈಗ ಯಾವ ರೋಗಿಗಳೂ ಇಲ್ಲ. ಎಲ್ಲರನ್ನೂ ಮೈಸೂರಿಗೆ ಕಳುಹಿಸಲಾಗಿದೆ ಎಂದು ವೈದ್ಯರು ಮಾಹಿತಿ ನೀಡಿದರು.

ADVERTISEMENT

ಮೈಸೂರಿನ ಏಳೆಂಟು ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.23 ಜನರು ಇನ್ನೂ ಗಂಭೀರ ಸ್ಥಿತಿಯಲ್ಲಿಯೇ ಇದ್ದಾರೆ. ಪ್ರಕರಣದ ಬಗ್ಗೆ ಉನ್ನತ ತನಿಖೆಯ ಅಗತ್ಯವಿದೆ ಎಂದು ಸಚಿವ ಪುಟ್ಟರಂಗಶೆಟ್ಟಿ ಹೇಳಿದರು. ‘ತನಿಖೆ ಪ್ರಗತಿಯಲ್ಲಿದೆ. ಈಗಲೇ ಏನೂ ಹೇಳಲು ಸಾಧ್ಯವಿಲ್ಲ’ ಎಂದು ಶಾಸಕ ಆರ್. ನರೇಂದ್ರ ಪ್ರತಿಕ್ರಿಯಿಸಿದರು.

ಮೃತರ ಕುಟುಂಬ ಮತ್ತು ಅಸ್ವಸ್ಥರ ಚಿಕಿತ್ಸೆಗೆ ವೈಯಕ್ತಿಕವಾಗಿ ಸಹಾಯ ಮಾಡುವುದಾಗಿಶಾಸಕರು, ಸಂಸದರು ಹಾಗೂ ಸಚಿವರು ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.