ADVERTISEMENT

ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ಸ್‌: ವಿಚಾರಣೆಗೆ ಹಾಜರಾದ ಇಂದ್ರಜಿತ್ ಲಂಕೇಶ್

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2020, 11:08 IST
Last Updated 31 ಆಗಸ್ಟ್ 2020, 11:08 IST
 ಇಂದ್ರಜಿತ್ ಲಂಕೇಶ್
ಇಂದ್ರಜಿತ್ ಲಂಕೇಶ್   

ವಿಚಾರಣೆಗೆ ಹಾಜರಾದ ಇಂದ್ರಜಿತ್ ಲಂಕೇಶ್

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಅವ್ಯಾಹತವಾಗಿದೆ ಎನ್ನಲಾದ ಡ್ರಗ್ಸ್ ಪ್ರಕರಣ ಸಂಬಂಧ ಮಾಹಿತಿ ನೀಡಲು ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರು ಇಂದು ಸಿಸಿಬಿ ಕಚೇರಿಗೆ ಹಾಜರಾದರು.

‘ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ಸ್ ದಂಧೆ ಇದೆ’ ಎಂದು ಇಂದ್ರಜಿತ್ ಅವರು ಹೇಳಿಕೆ ನೀಡಿದ್ದರು. ಕಚೇರಿಗೆ ಬಂದು ದಂಧೆ ಬಗ್ಗೆ ನಿಖರ ಮಾಹಿತಿ ನೀಡುವಂತೆ ಸಿಸಿಬಿ ಅಧಿಕಾರಿಗಳು, ನೋಟಿಸ್ ನೀಡಿದ್ದರು.

ಬೆಳಿಗ್ಗೆ 11.30ರ ಸುಮಾರಿಗೆ ಲ್ಯಾಪ್‌ಟಾಪ್ ಸಮೇತ ಸಿಸಿಬಿ ಕಚೇರಿಗೆ ಬಂದ ಇಂದ್ರಜಿತ್ ಅವರನ್ನು ಎಸಿಪಿ ಗೌತಮ್‌ ಕುಮಾರ್ ಹಾಗೂ ಇನ್‌ಸ್ಪೆಕ್ಟರ್ ಬೋಳೆತ್ತಿನ್ ಅವರು ವಿಚಾರಣೆ ನಡೆಸಿದರು. ಎರಡು ಗಂಟೆಯ ವಿಚಾರಣೆಯಲ್ಲಿ ತಮ್ಮ ಬಳಿ ಇರುವ ದಾಖಲೆಗಳನ್ನು ಇಂದ್ರಜಿತ್ ಅವರು ಹಂಚಿಕೊಂಡಿದ್ದಾರೆ.

ADVERTISEMENT

ಇಂದ್ರಜಿತ್ ಅವರ ಹೇಳಿಕೆಯನ್ನು ದಾಖಲಿಸಿಕೊಂಡಿರುವ ಪೊಲೀಸರು, ಅದನ್ನು ಪರಿಶೀಲನೆ ಮಾಡುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.