ADVERTISEMENT

ಕರ್ನಾಟಕದ 9 ಜಿಲ್ಲೆಯಲ್ಲಿ ಕೈಗಾರಿಕಾ ಕಾರಿಡಾರ್: ಕೇಂದ್ರದಿಂದ ಸಕಾರಾತ್ಮಕ ಸ್ಪಂದನೆ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2025, 13:41 IST
Last Updated 26 ನವೆಂಬರ್ 2025, 13:41 IST
<div class="paragraphs"><p>ಎಚ್.ಡಿ. ಕುಮಾರಸ್ವಾಮಿ,&nbsp;ಪೀಯೂಷ್ ಗೋಯಲ್</p></div>

ಎಚ್.ಡಿ. ಕುಮಾರಸ್ವಾಮಿ, ಪೀಯೂಷ್ ಗೋಯಲ್

   

ನವದೆಹಲಿ: ಕರ್ನಾಟಕದ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆ ಜಾರಿಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ.

ಯೋಜನೆ ಜಾರಿಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪೀಯೂಷ್ ಗೋಯಲ್ ಅವರು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದ್ದಾರೆ.

ADVERTISEMENT

ನವೆಂಬರ್ 13ರಂದು ಗೋಯಲ್ ಅವರನ್ನು ಭೇಟಿಯಾಗಿದ್ದ ಕುಮಾರಸ್ವಾಮಿ, ‘ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಹಾಸನ, ಮಂಗಳೂರು, ಹುಬ್ಬಳ್ಳಿ-ಧಾರವಾಡ, ರಾಯಚೂರು ಮತ್ತು ಬೀದರ್ ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ ಅನುಷ್ಠಾನ ಮಾಡಬೇಕೆಂದು ಮನವಿ ಮಾಡಿದ್ದರು.

ಪ್ರಸ್ತಾವಿತ ಈ ಕೈಗಾರಿಕಾ ಪಾರ್ಕುಗಳು ದೊಡ್ಡ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಸುವ, ಪ್ರಾದೇಶಿಕ ಪೂರೈಕೆ ಸರಪಳಿಯ ಸಂಪರ್ಕಗಳನ್ನು ಮತ್ತಷ್ಟು ಬಲಪಡಿಸುವ ಹಾಗೂ ಹುಬ್ಬಳ್ಳಿ-ಧಾರವಾಡ ಮತ್ತು ಮಂಗಳೂರಿನಲ್ಲಿ ಸಾಗಣೆ ಮತ್ತು ತಯಾರಿಕೆಯಿಂದ ಮೊದಲುಗೊಂಡು ರಾಯಚೂರಿನಲ್ಲಿ ಕೃಷಿ ಸಂಸ್ಕರಣೆ, ಮೈಸೂರು ಮತ್ತು ಕೋಲಾರದಲ್ಲಿ ಮೌಲ್ಯವರ್ಧಿತ ವಲಯಗಳ ವಿಸ್ತರಣೆವರೆಗೆ ವಿಶೇಷ ಕೈಗಾರಿಕಾ ಸಮೂಹಗಳನ್ನು ಉತ್ತೇಜಿಸುತ್ತವೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.