ADVERTISEMENT

ಕೆಲಸದ ಅವಧಿ ಹೆಚ್ಚಳಕ್ಕೆ ವಿರೋಧ: 23ಕ್ಕೆ ಕೈಗಾರಿಕಾ ಕಾರ್ಮಿಕರ ಮುಷ್ಕರ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2023, 16:21 IST
Last Updated 2 ಮಾರ್ಚ್ 2023, 16:21 IST
   

ಬೆಂಗಳೂರು: ಕೆಲಸದ ಅವಧಿ ಹೆಚ್ಚಳ ಮತ್ತು ಮಹಿಳೆಯರಿಗೆ ರಾತ್ರಿ ಪಾಳಿ ವಿರೋಧಿಸಿ ಕಾರ್ಮಿಕ ಸಂಘಟನೆಗಳು ಇದೇ 23ರಂದು ರಾಜ್ಯದಾದ್ಯಂತ ಮುಷ್ಕರಕ್ಕೆ ನಿರ್ಧರಿಸಿವೆ.

ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ) ಕಚೇರಿಯಲ್ಲಿ ಕಾರ್ಮಿಕ ಮುಖಂಡ ಜಿ.ಆರ್. ಶಿವಶಂಕರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೂಗೊಳ್ಳಲಾಗಿದೆ. ಸಿಐಟಿಯುನ ಮೀನಾಕ್ಷಿ ಸುಂದರಂ, ಎಐಟಿಯುಸಿಯ ಸತ್ಯಾನಂದ ಮತ್ತು ಅಮ್ಜದ್, ಎಐಸಿಸಿಟಿಯುನ ಮೈತ್ರೇಯಿ ಕೃಷ್ಣನ್, ಕೆಡಬ್ಲ್ಯುಯುನ ಮಿಲ್ಕಿಯೋರ್ ಹಾಗೂ ಎಐಯುಟಿಯುಸಿಯ ಕೆ.ವಿ. ಭಟ್ ಸಭೆಯಲ್ಲಿ ಭಾಗವಹಿಸಿದ್ದರು.

ಇದೇ 8ರಂದು ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಮುಷ್ಕರದ ನೋಟಿಸ್‌ಗಳನ್ನು ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ. ಅದೇ ದಿನ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಕಾರ್ಖಾನೆ ಮತ್ತು ಬಾಯ್ಲರ್‌ಗಳ ನಿರ್ದೇಶಕರ ಕಚೇರಿ ಮುಂದೆ ಸಾಂಕೇತಿಕ ಪ್ರತಿಭಟನೆ ನಡೆಸಲಾಗುತ್ತದೆ. 23ರಂದು ರಾಜ್ಯದಾದ್ಯಂತ ಮುಷ್ಕರ ನಡೆಸಿ, ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.