ADVERTISEMENT

ನೋಡಿ: ಪ್ರೊ. ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟರ ಕುರಿತ ಸಾಕ್ಷ್ಯಚಿತ್ರ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2021, 5:32 IST
Last Updated 6 ಮಾರ್ಚ್ 2021, 5:32 IST

ಕನ್ನಡದ ಜನಪ್ರಿಯ ಕವಿಗಳಲ್ಲಿ ಒಬ್ಬರಾದ ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟ (84) ಅವರು ಶನಿವಾರ (ಮಾ.6) ಬೆಳಗ್ಗೆ ನಿಧನರಾದರು.

ಕನ್ನಡ ಸಾಹಿತ್ಯ ಲೋಕದಲ್ಲಿ, ‘ಎನ್ನೆಸ್ಸೆಲ್’ ಎಂದೇ ಮನೆಮಾತಾಗಿದ್ದ ಅವರು, ಭಾವಗೀತೆ, ಸಾಹಿತ್ಯ ವಿಮರ್ಶೆ, ಅನುವಾದ, ನವ್ಯಕವಿತೆ ಸೇರಿದಂತೆ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ತೊಡಗಿಸಿಕೊಂಡಿದ್ದರು. ಕನ್ನಡ, ಸಂಸ್ಕೃತ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಕೃತಿರಚನೆ ಮಾಡಿದ್ದಾರೆ.

ಷೇಕ್ಸ್‌ಪಿಯರ್, ಎಲಿಯಟ್ಸ್​ ಮುಂತಾದ ಇಂಗ್ಲಿಷ್ ಸಾಹಿತಿಗಳ ಕಾವ್ಯಗಳನ್ನು ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಸಂದಿವೆ.

ADVERTISEMENT

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.