ಬೆಂಗಳೂರು: ಕರ್ನಾಟಕ ರಾಜ್ಯ ಮಾಹಿತಿ ಆಯೋಗದ ಆಯುಕ್ತರನ್ನಾಗಿ ನಿವೃತ್ತ ಐಎಎಸ್ ಅಧಿಕಾರಿ ರಿಚರ್ಡ್ ವಿನ್ಸೆಂಟ್ ಡಿಸೋಜ, ಪತ್ರಕರ್ತರಾದ ಬಿ.ವೆಂಕಟ್ ಸಿಂಗ್ ಮತ್ತು ಮಹೇಶ್ ವಾಳ್ವೇಕರ್ ಅವರನ್ನು ನೇಮಿಸಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಆದೇಶ ಹೊರಡಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಳೆದ ವಾರ ನಡೆದ ಸಭೆಯಲ್ಲಿ ಈ ಮೂವರ ಹೆಸರುಗಳನ್ನು ಅಂತಿಮಗೊಳಿಸಿ ರಾಜ್ಯಪಾಲರಿಗೆ ಶಿಫಾರಸು ಮಾಡಿದ್ದರು. ಈ ಹೆಸರುಗಳಿಗೆ ರಾಜ್ಯಪಾಲರು ಒಪ್ಪಿಗೆ ನೀಡಿ ಬುಧವಾರ ಅಧಿಕೃತ ಆದೇಶ ಹೊರಡಿಸಿದ್ದಾರೆ.
ವಿನ್ಸೆಂಟ್ ಡಿಸೋಜ ಮತ್ತು ಮಹೇಶ್ ವಾಳ್ವೇಕರ್ ಅವರನ್ನು ಬೆಂಗಳೂರು ವಿಭಾಗಕ್ಕೂ, ವೆಂಕಟ್ ಸಿಂಗ್ ಅವರನ್ನು ಕಲಬುರಗಿ ವಿಭಾಗದ ಆಯುಕ್ತರನ್ನಾಗಿ ನೇಮಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.