ADVERTISEMENT

ಇನ್ಫೊಸಿಸ್‌ಗೆ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2019, 19:21 IST
Last Updated 28 ಸೆಪ್ಟೆಂಬರ್ 2019, 19:21 IST

ಬೆಂಗಳೂರು:ಹವಾಮಾನ ಬದಲಾವಣೆ ನಿಟ್ಟಿನಲ್ಲಿ ಕೈಗೊಳ್ಳುವ ಉಪಕ್ರಮಗಳಿಗೆವಿಶ್ವಸಂಸ್ಥೆ ನೀಡುವ‘ಗ್ಲೋಬಲ್ ಕ್ಲೈಮೇಟ್ ಆ್ಯಕ್ಷನ್’ ಪ್ರಶಸ್ತಿಗೆ ಇನ್ಫೊಸಿಸ್‌ ಪ್ರತಿಷ್ಠಾನ ಆಯ್ಕೆಯಾಗಿದೆ.

ವಿಶ್ವಸಂಸ್ಥೆಯ ಹವಾಮಾನ ಸಮ್ಮೇಳನದಲ್ಲಿ ಹವಾಮಾನ ಬದಲಾವಣೆಗೆ ಯೋಜನೆಗಳನ್ನು ರೂಪಿಸಿರುವ ಅತ್ಯುತ್ತಮ ಸಂಸ್ಥೆಗಳಿಗೆ ವಿವಿಧ ಪ್ರಶಸ್ತಿಗಳನ್ನು ಘೋಷಿಸಲಾಯಿತು.ಮುಂಬರುವ ಡಿಸೆಂಬರ್‌ನಲ್ಲಿ ಚಿಲಿಯ ಸ್ಯಾಂಟಿಯಾಗೋದಲ್ಲಿ ನಡೆಯಲಿರುವ ವಿಶ್ವ ಸಂಸ್ಥೆಯ ಹವಾಮಾನ ಬದಲಾವಣೆ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

‘ಪ್ರಶಸ್ತಿಗೆ 670ಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದವು. ಇನ್ಫೊಸಿಸ್‌ ಪ್ರತಿಷ್ಠಾನಕ್ಕೆ ಪ್ರಶಸ್ತಿಯನ್ನು ನೀಡಲು ಹೆಮ್ಮೆ ಎನಿಸುತ್ತಿದೆ’ ಎಂದು ಹವಾಮಾನ ಬದಲಾವಣೆಯ ಜಾಗತಿಕ ಹವಾಮಾನ ಕ್ರಿಯಾ ಕಾರ್ಯಕ್ರಮದ ವ್ಯವಸ್ಥಾಪಕ ನಿಕ್ಲಸ್ ಸ್ವೆನ್ನಿಂಗ್ಸೆನ್ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.