ADVERTISEMENT

‘ಇನ್ಫೊಸಿಸ್‌ ಸ್ಪ್ರಿಂಗ್‌ಬೋರ್ಡ್‌’ ಆ್ಯಪ್‌ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2021, 21:54 IST
Last Updated 2 ಸೆಪ್ಟೆಂಬರ್ 2021, 21:54 IST
ಇನ್ಫೊಸಿಸ್‌
ಇನ್ಫೊಸಿಸ್‌   

ಬೆಂಗಳೂರು: 2025ರ ವೇಳೆಗೆ 1 ಕೋಟಿಗೂ ಅಧಿಕ ವಿದ್ಯಾರ್ಥಿಗಳಿಗೆ ಡಿಜಿಟಲ್‌ ಮರುಕೌಶಲ ಉಪಕ್ರಮಗಳನ್ನು ವಿಸ್ತರಿಸಲು ಮುಂದಾಗಿರುವ ಇನ್ಫೊಸಿಸ್‌ ಸಂಸ್ಥೆ, ಇದಕ್ಕಾಗಿ ‘ಇನ್ಫೊಸಿಸ್‌ ಸ್ಪ್ರಿಂಗ್‌ಬೋರ್ಡ್‌’ ಆ್ಯಪ್‌ ಬಿಡುಗಡೆಗೊಳಿಸಿದೆ.

‌‘ಈ ಆ್ಯಪ್‌ ಮೂಲಕ 6ನೇ ತರಗತಿಯಿಂದಲೇ ಮಕ್ಕಳಿಗೆ ಜೀವನ ಕೌಶಲಗಳನ್ನು ಕಲಿಸಲಾಗುತ್ತದೆ. ಔಪಚಾರಿಕ ಶಿಕ್ಷಣದ ಜೊತೆಗೆ ಶಾಲಾ, ಕಾಲೇಜು ವಿದ್ಯಾರ್ಥಿಗಳು, ವೃತ್ತಿಪರರು ಹಾಗೂ ವಯಸ್ಕರಿಗೆ ಡಿಜಿಟಲ್‌ ಮರುಕೌಶಲ ಕಲಿಸುವುದೂ ಇದರ ಉದ್ದೇಶ. ಕೋರ್ಸೆರಾ ಮತ್ತು ಲರ್ನ್‌ಶಿಪ್‌ ಸಹಯೋಗದೊಂದಿಗೆ ಪಠ್ಯಕ್ರಮವನ್ನು ಅಭಿವೃದ್ಧಿಪಡಿಸಲಾಗಿದೆ. ಇದು ನೂತನ ರಾಷ್ಟ್ರೀಯ ಶಿಕ್ಷಣ ನೀತಿಗೆ ಪೂರಕವಾಗಿದೆ’ ಎಂದು ಪ್ರಕಟಣೆ ತಿಳಿಸಿದೆ.

‘ಆನ್‌ಲೈನ್‌ ಮೂಲಕ ಪರೀಕ್ಷೆಗಳನ್ನು ನಡೆಸಿ ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ತಿಳಿಯಲಾಗುತ್ತದೆ. ಪರೀಕ್ಷೆಯಲ್ಲಿ
ಉತ್ತೀರ್ಣರಾದವರಿಗೆ ಪ್ರಮಾಣ ಪತ್ರಗಳನ್ನೂ ನೀಡಲಾಗುತ್ತದೆ. ಮಕ್ಕಳ ಪ್ರಾಯೋಗಿಕ ಕಲಿಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತದೆ. ಈ ಆ್ಯಪ್‌ ಪ್ಲೇ ಸ್ಟೋರ್‌ ಹಾಗೂ ಆ್ಯಪ್‌ ಸ್ಟೋರ್‌ಗಳಲ್ಲಿ ಲಭ್ಯವಿದೆ’ ಎಂದು ಹೇಳಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.