ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮೊಬೈಲ್ ಬಳಸುತ್ತಿರುವ ಕೈದಿಗಳು
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಕೈದಿಗಳಿಗೆ ವಿಶೇಷ ಆತಿಥ್ಯ ಮುಂದುವರಿದಿದೆ. ಕಾರಾಗೃಹದೊಳಗೆ ಕೈದಿಗಳು ವಿಲಾಸಿ ಜೀವನ ನಡೆಸುತ್ತಿರುವ ವಿಡಿಯೊ ಹಾಗೂ ಫೋಟೊಗಳು ಲಭ್ಯವಾಗಿವೆ.
ಅತ್ಯಾಚಾರದ ಪ್ರಕರಣದ ಅಪರಾಧಿ ಉಮೇಶ್ ರೆಡ್ಡಿ,ಇಸ್ಲಾಮಿಕ್ ಸ್ಟೇಟ್ (ಐಎಸ್) ಸಂಘಟನೆ ಉಗ್ರ ಜುಹಾದ್ ಹಮೀದ್ ಶಕೀಲ್ ಮನ್ನಾ ಹಾಗೂ ಚಿನ್ನ ಸಾಗಣೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಆರೋಪಿಗಳು, ಮೊಬೈಲ್ ಹಿಡಿದು ಮಾತನಾಡುತ್ತಿರುವ, ಬ್ಯಾರಕ್ ಒಳಗೆ ಎಲ್‌ಇಡಿ ಟಿ.ವಿ ವೀಕ್ಷಣೆ ಮಾಡುತ್ತಿರುವ ವಿಡಿಯೊಗಳು ಹರಿದಾಡುತ್ತಿವೆ.
ವಿಡಿಯೊಗಳು ಹರಿದಾಡಿದ ಬೆನ್ನಲ್ಲೇ ಪ್ರಕರಣದ ತನಿಖೆಗೆ ಕಾರಾಗೃಹ ಹಾಗೂ ಸುಧಾರಣಾ ಇಲಾಖೆಯ ಎಡಿಜಿಪಿ ಬಿ.ದಯಾನಂದ್ ಅವರು ಆದೇಶಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.