ಜಿ. ಪರಮೇಶ್ವರ
ಬೆಂಗಳೂರು: ‘ಶಾಸಕರಿಗೆ ₹80 ಲಕ್ಷ ಕೊಟ್ಟಿರುವುದಾಗಿ ಆನೇಕಲ್ ಇನ್‌ಸ್ಪೆಕ್ಟರ್ ಹೇಳಿಕೆ ನೀಡಿದ್ದಾರೆ. ಈ ವಿಚಾರವಾಗಿ ಎರಡು ದಿನಗಳಲ್ಲಿ ವರದಿ ನೀಡುವಂತೆ ಸೂಚಿಸಿದ್ದೇನೆ’ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದ್ದಾರೆ.
ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಶುಕ್ರವಾರ ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.
‘ಶಾಸಕರ ಮೇಲೆ ಆರೋಪ ಮಾಡುತ್ತಾನೆ ಎಂದಾದರೆ, ಈವರೆಗೂ ಯಾಕೆ ಕ್ರಮ ತೆಗೆದುಕೊಂಡಿಲ್ಲ. ವರದಿ ಕೊಟ್ಟರೆ ತಕ್ಷಣ ಕ್ರಮ ತೆಗೆದುಕೊಳ್ಳುತ್ತೇವೆ’ ಎಂದು ಹೇಳಿದರು.
ಡ್ರಗ್ಸ್ ದಂಧೆಯ ಜತೆ ನಂಟು ಹೊಂದಿದ್ದ ಇನ್‌ಸ್ಪೆಕ್ಟರ್ ಸೇರಿ 11 ಮಂದಿ ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಅವರ ವಿರುದ್ಧ ತಕ್ಷಣವೇ ಇಲಾಖಾ ವಿಚಾರಣೆ ನಡೆಸಿ, ಸರ್ಕಾರಕ್ಕೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
‘ಡ್ರಗ್ಸ್ ಮಾಫಿಯಾ ಮತ್ತು ಇತರ ಅಕ್ರಮ ದಂಧೆಯಲ್ಲಿ ಪೊಲೀಸರು ಶಾಮೀಲಾಗಿರುವುದು ಕಂಡುಬಂದರೆ ಇನ್ನು ಎಚ್ಚರಿಕೆ ಕೊಡುವುದಿಲ್ಲ. ನೇರ ಕ್ರಮ ತೆಗೆದುಕೊಳ್ಳುತ್ತೇವೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.