ಎಂ.ಪಿ.ರೇಣುಕಾಚಾರ್ಯ
ಬೆಂಗಳೂರು: ‘ಬಿ.ವೈ.ವಿಜಯೇಂದ್ರ ಅವರೇ ಅಧ್ಯಕ್ಷರಾಗಿ ಮುಂದುವರೆಯುವ ಸಾಧ್ಯತೆ ಇದ್ದು, ಇನ್ನೊಂದು ವಾರದೊಳಗೆ ಪಕ್ಷದ ಆಂತರಿಕ ಸಂಘರ್ಷ ಕೊನೆಗೊಳ್ಳಲಿದೆ’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.
'ಬುಧವಾರ ನಡೆಯಬೇಕಿದ್ದ ಸಭೆಯನ್ನು ಅಧ್ಯಕ್ಷರ ಮನವಿಯ ಮೇರೆಗೆ ರದ್ದು ಮಾಡಿದ್ದೇವೆ’ ಎಂದು ಅವರು ಸುದ್ದಿಗಾರರಿಗೆ ಮಂಗಳವಾರ ತಿಳಿಸಿದರು.
ಬಸನಗೌಡ ಪಾಟೀಲ ಯತ್ನಾಳ ಅವರಿಗೆ ನೋಟಿಸ್ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ‘ಬಿಜೆಪಿಯಲ್ಲಿ ವ್ಯಕ್ತಿಗಿಂತ ಪಕ್ಷ ಮುಖ್ಯ. ಪಕ್ಷಕ್ಕಿಂತ ದೇಶ ಮುಖ್ಯ. ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರನ್ನು ಟೀಕೆ ಮಾಡಿದರೆ ಪಕ್ಷವನ್ನು ಟೀಕೆ ಮಾಡಿದಂತೆ’ ಎಂದು ಹೇಳಿದರು.
‘ರಾಷ್ಟ್ರೀಯ ನಾಯಕರು ಎಲ್ಲರ ಹೇಳಿಕೆಗಳನ್ನು ಗಮನಿಸುತ್ತಿದ್ದಾರೆ. ಯಾವ ಸಂದರ್ಭದಲ್ಲಿ ಯಾರ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂಬುದನ್ನು ಅವರು ತೀರ್ಮಾನಿಸುತ್ತಾರೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.